ರಾಯಚೂರು

ತುರ್ವಿಹಾಳ; ಆನೆಕಾಲು ರೋಗ ಮಾತ್ರೆ ವಿತರಣೆ

Published On :

ಸಿಂಧನೂರು: ತಾಲೂಕಿನ ತುರ್ವಿಹಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ 40 ಗ್ರಾಮಗಳಲ್ಲಿ ಸಾಮೂಹಿಕ ಔಷಧ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ 226 ಔಷಧ ವಿತರಕರು ಭಾಗವಹಿಸಿದ್ದರು. 23 ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸಿದರು.
ಆರೋಗ್ಯಾಧಿಕಾರಿ ಮಂಜುನಾಥ ಅಣಗೌಡರ್ ಮಾತನಾಡಿ, ಪ್ರತಿಯೊಬ್ಬರು ಆನೆಕಾಲು ರೋಗ ನಿಯಂತ್ರಣಕ್ಕಾಗಿ ಡಿಇಸಿ ಗುಳಿಗೆಗಳನ್ನು ಅಲ್ಬೆಂಡಿಜಾಲ್ ಜೊತೆಗೆ ತೆಗೆದುಕೊಳ್ಳಬೇಕು 5- 6 ವರ್ಷ ಸತತವಾಗಿ ಮಾತ್ರೆಗಳನ್ನು ಸೇವಿಸುವುದರಿಂದ ಆನೆಕಾಲು ರೋಗವನ್ನು ತಡೆಗಟ್ಟಬಹುದಾಗಿದೆ ಎಂದರು.
2ರಿಂದ 5 ವರ್ಷದವರು ಒಂದು ಮಾತ್ರೆ, 6ರಿಂದ 14 ವರ್ಷದವರು 2 ಮಾತ್ರೆ, 15 ವರ್ಷ ಮೇಲ್ಪಟ್ಟವರು 3 ಮಾತ್ರೆ. ಇದರ ಜೊತೆಗೆ ಪ್ರತಿಯೊಬ್ಬರು ಅಲ್ಬೆಂಡಿಜಾಲ್ ತೆಗೆದುಕೊಳ್ಳಬೇಕು ಎಂದು ಹೇಳಿದರು. ತಮ್ಮ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಎಲ್ಲ ಗ್ರಾಮಗಳಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೇರವೇರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.