ವಿದ್ಯುತ್ ಸ್ಪರ್ಶ: ಕಾರ್ಮಿಕ ಸಾವು
ರಾಯಚೂರು: ನಗರದ ಬೊಮ್ಮನವಾಡಿಯಲ್ಲಿ ಮನೆ ನಿರ್ಮಾಣದಲ್ಲಿ ತೊಡಗಿದ್ದ ಕಾರ್ಮಿಕನೊಬ್ಬನಿಗೆ ವಿದ್ಯುತ್ ಸ್ಪರ್ಷವಾಗಿ ಮೃತಪಟ್ಟಿದ್ದಾನೆ.
ಮೃತನನ್ನು ಲಿಂಗಖಾನದೊಡ್ಡಿಯ ಸಣ್ಣ ತಿಮ್ಮಪ್ಪ ಎಂದು ಗುರುತಿಸಲಾಗಿದೆ. ಈತ ಮನೆಯೊಂದರ ನಿರ್ಮಾಣ ಕಾಮಗಾರಿಯಲ್ಲಿ ವಿದ್ಯುತ್ನಿಂದ ಕಾಂಕ್ರೀಟ್ ಕೊರೆಯುವ ಯಂತ್ರದ ಬಳಕೆಯಲ್ಲಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಸವಾರರ ಸಾವು
ರಾಯಚೂರು: ತಾಲೂಕಿನ ನಲ್ಲಬಂಡಾ ಕ್ರಾಸ್ ಬಳಿ ಆಟೋ ಮತ್ತು ಬೈಕ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಆಲ್ಕೂರು ಗ್ರಾಮದ ರಮೇಶ್ ಮತ್ತು ಹನುಮಂತು ಎಂದು ಗುರುತಿಸಲಾಗಿದೆ. ಇವರು ಬೈಕ್ನಲ್ಲಿ ರಾಯಚೂರಿನಿಂದ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಆಟೋಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಡಿಕ್ಕಿ; ವ್ಯಕ್ತಿ ಸಾವು
ರಾಯಚೂರು: ನಗರದ ಹೊರವಲಯದ ಗದ್ವಾಲ್ ರಸ್ತೆಯಲ್ಲಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾನೆ.
ಮೃತನನ್ನು ತಿಮ್ಮಾರೆಡ್ಡಿ ಎಂದು ಗುರುತಿಸಲಾಗಿದೆ. ಈತ ಬೈಕ್ನಲ್ಲಿ ನಗರದ ಗದ್ವಾಲ್ ರಸ್ತೆಯ ಅಜಯ ರೈಸ್ ಮಿಲ್ ಬಳಿ ತೆರಳುತ್ತಿದ್ದಾಗ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

