ರಾಯಚೂರು

ಮತದಾರ ಪಟ್ಟಿಯಲ್ಲಿ ತಪ್ಪು; ತಹಸೀಲ್ದಾರರಿಗೆ ತಾಕೀತು

Published On :

ಸಿಂಧನೂರು: ಸ್ಥಳೀಯ ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ತಯಾರಿಸಲಾದ ನೂತನ ಮತದಾರರ ಪಟ್ಟಿಯಲ್ಲಿ ನಕಲಿ ಮತದಾರರ ಹೆಸರುಗಳು ಸೇರ್ಪಡೆಯಾಗಿರುವ ಬಗ್ಗೆ ಗಮನಕ್ಕೆ ಬಂದಿದ್ದು, ನಕಲಿ ಮತದಾನ ಚಲಾಯಿಸಿದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ ಎಚ್ಚರಿಸಿದ್ದಾರೆ.
ನಗರದ ತಹಸೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ, ನಗರದ ವಿವಿಧ ವಾರ್ಡ್‌ಗಳ ಮತದಾರರ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದ ಮತದಾರರನ್ನು ಸೇರ್ಪಡೆಗೊಳಿಸಿದ್ದಾರೆ ಎಂದು ದೂರು ಬಂದಿವೆ. ನಕಲಿ ಮತದಾನಕ್ಕೆ ಕಡಿವಾಣ ಹಾಕಲು ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯ ತಾಲೂಕುಗಳಲ್ಲಿ ಈ ಸಮಸ್ಯೆ ಕಂಡುಬಂದಿಲ್ಲ. ಸಿಂಧನೂರಿನಲ್ಲಿ ಮಾತ್ರ ಮತದಾರ ಪಟ್ಟಿಯಲ್ಲಿ ತಪ್ಪುಗಳಾಗಿದ್ದು ಶೀಘ್ರವೇ ಸರಿಪಡಿಸುವಂತೆ ತಹಸೀಲ್ದಾರರಿಗೆ ತಾಕೀತು ಮಾಡಿದರು.
ಅಸಮಾಧಾನ: ತಹಸೀಲ್ದಾರ್ ಎಂ.ಚಂದ್ರಶೇಖರ ವಿರುದ್ಧ ಜಿಲ್ಲಾಧಿಕಾರಿ ನಾಗರಾಜ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಮತದಾನ ಪಟ್ಟಿಯಲ್ಲಿ ಏರುಪೇರಾಗಲು ನಿಮ್ಮ ಬೇಜವಾಬ್ದಾರಿಯೇ ಕಾರಣ. ಆರ್‌ಒಗಳು ಸಹ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹೀಗಾಗಿ ತಪ್ಪುಗಳು ಸಂಭವಿಸುತ್ತಿದೆ ಎಂದು ಆಕ್ರೋಶ ಅವರು, ಚುನಾವಣೆ ಮುಗಿಯುವವರೆಗೆ ಯಾವುದೇ ಪಕ್ಷಗಳ ಬಗ್ಗೆ ಮೃದುಧೋರಣೆ ತಾಳದೆ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಇಲ್ಲದಿಂದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಮನವಿ: ತಾಲೂಕಿನ ಟೇಲ್ಯಾಂಡ್ ಭಾಗಕ್ಕೆ ತುಂಗಭದ್ರಾ ನೀರು ಹರಿಸುವಂತೆ ದಡೇಸುಗೂರು ಮತ್ತು ಸಿಂಗಾಪುರ ಗ್ರಾಮದ ರೈತರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು. ಚುನಾವಣೆಯ ನಂತರ ಈ ಬಗ್ಗೆ ಪರಿಶೀಲಿಸಲಾಗುವುದು ಎಂದು ಡಿ.ಸಿ. ನಾಗರಾಜ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.