ವೃತ್ತಿ ನಿರತರಿಗೆ ಸನ್ಮಾನ; ಮೆಚ್ಚುಗೆ
ರಾಯಚೂರು: ವಸತಿ, ಊಟದ ವ್ಯವಸ್ಥೆಯಿರುವ ಮಹಿಳಾ ಹಾಸ್ಟೆಲ್ ನಿರ್ಮಿಸುವ ಆರ್ಯವೈಶ್ಯ ಅಧಿಕಾರಿಗಳ ಸಂಘದ ಯೋಜನೆ ಶ್ಲಾಘನೀಯ ಕಾರ್ಯವಾಗಿದೆ. ಮಹಿಳೆಯರನ್ನು ಗೌರವದಿಂದ ಕಾಣುವುದು ನಮ್ಮ ಸಂಸ್ಕೃತಿಯಾಗಿದ್ದು, ಎಲ್ಲರೂ ಪಾಲಿಸಬೇಕಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್. ಶಂಕ್ರಪ್ಪ ಹೇಳಿದರು. ಅವರು ಈಚೆಗೆ ಆರ್ಯವೈಶ್ಯ ಗೀತಾ ಮಂದಿರದಲ್ಲಿ ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿ ನಿರತರ ಸಂಘದಿಂದ ಆಯೋಜಿಸಿದ್ದ 32ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಮಾರಂಭದಲ್ಲಿ ವಾಣಿಜ್ಯೋದ್ಯಮ ಸಂಘದ ಉಪಾಧ್ಯಕ್ಷ ಬಿ.ಜಗದೀಶ ಗುಪ್ತಾ, ವಾಸವಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಆರ್.ರಾಮಚಂದ್ರ ಶೆಟ್ಟಿ, ಆರ್ಯವೈಶ್ಯ ಸಮಾಜದ ಸಹಕಾರ್ಯದರ್ಶಿ ಎಂ.ಆರ್. ವೀರಣ್ಣ ಸಭೆಯನ್ನುದ್ದೇಶಿಸಿ ಮಾತನಾಡಿದರು. ರಾಯಚೂರು ರೈಸ್ ಮಿಲ್ಲರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಮಾರಂ ತಿಪ್ಪಣ್ಣ ಶೆಟ್ಟಿ, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ. ಗೋವಿಂದ, ಗಂಜ್ ಕಲ್ಯಾಣ ಮಂಟಪದ ಕಾರ್ಯದರ್ಶಿ ಜಟ್ರಂ ವೆಂಕಟೇಶ, ಕನ್ನಿಕಾ ಪರಮೇಶ್ವರಿ ಹಾಸ್ಟೆಲ್ ಸಮಿತಿ ಕೋಶಾಧ್ಯಕ್ಷ ಸಾವಿತ್ರಿ ಶಶಿಭೂಷಣ್ ಇದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಆರ್ಯವೈಶ್ಯ ಅಧಿಕಾರಿಗಳ ಹಾಗೂ ವೃತ್ತಿ ನಿರತರ ಸಂಘದ ಅಧ್ಯಕ್ಷ ದೇವಗಾರಿ ಸತೀಶ ಕುಮಾರ್ ವಹಿಸಿದ್ದರು. ಜವಳಗೇರಾ ಗ್ರಾಪಂ ಅಧ್ಯಕ್ಷೆಯಾಗಿ ಆಯ್ಕೆಗೊಂಡ ರಾಧಾ ರವಿಕುಮಾರ್ ಶೆಟ್ಟಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೀರಣ್ಣ ಮುದಗಲ್, ಧಾರ್ಮಿಕ ಪರಿಷತ್ ಜಿಲ್ಲಾ ಸದಸ್ಯ ಗಾಣದಾಳ ಲಕ್ಷ್ಮೀಪತಿ ಮತ್ತು ಸೇವೆಯಿಂದ ನಿವೃತ್ತರಾದ ಕೆ. ಗಿರಿಧರ, ಕಾಶಿನಾಥ ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

