ತಿಡಿಗೋಳ: ಅಪೌಷ್ಟಿಕ ಮಕ್ಕಳ ಸಮೀಕ್ಷೆ
ಸಿಂಧನೂರು: ತಾಲೂಕಿನ ತಿಡಿಗೋಳ ಮತ್ತಿತರ ಗ್ರಾಮಗಳಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಮೀಕ್ಷೆ ಕಾರ್ಯ ನಡೆಸಲಾಯಿತು. ತಾಲೂಕಿನಲ್ಲಿ ಸುಮಾರು 400 ಜನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆಂದು ವರದಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಕುಟುಂಬ ಮತ್ತು ಕಲ್ಯಾಣ ಅಧಿಕಾರಿ ಆದೇಶದನ್ವಯ ತಾಲೂಕು ಆರೋಗ್ಯಾಧಿಕಾರಿ ಡಾ. ಸೈಯದ್ ಹುಸೇನ್ ಹುಸೇನ್, ಸಿಡಿಪಿಒ ಹನುಮಂತಪ್ಪ ಓಲೇಕಾರ ಹಾಗೂ ತುರ್ವಿಹಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ ಅಣಗೌಡರ್ ಅವರು ಸಮೀಕ್ಷೆ ನಡೆಸಿದರು.
ಅಪೌಷ್ಟಿಕತೆಯಿಂದ ಬಳಲುತ್ತಿರುವ 18 ಮಕ್ಕಳನ್ನು ಮಾತ್ರ ಪತ್ತೆ ಹಚ್ಚಿದ್ದು ಸರ್ಕಾರದಿಂದ ಪೌಷ್ಟಿಕ ಆಹಾರ, ಹಾಲು ಮೊಟ್ಟೆ ವಿತರಣೆ ಹಾಗೂ ಆರೋಗ್ಯ ತಪಾಸಣೆ ನಡೆಸಲಾಗುವುದು. ರಕ್ತಹೀನತೆಯಿಂದ ಬಳಲುವ ಮಕ್ಕಳಿಗೆ ಬಾಲ ಸಂಜೀವಿನಿ ಯೋಜನೆಯಡಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುವುದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ಡಾ. ಹಸನ್ ಹುಸೇನ್ ತಿಳಿಸಿದರು.
---
ಬಿಸಿಯೂಟ ಸೇವೆ ಹಾಜರಾತಿಗೆ ನಿರಾಕರಣೆ: ಆರೋಪ
ರಾಯಚೂರು: ತಾಲೂಕಿನ ತುರುಕನಡೋಣಾ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಅಕ್ಷರ ದಾಸೋಹ ಯೋಜನೆಯ ಬಿಸಿಯೂಟ ತಯಾರಿಸುವ ಸಿಬ್ಬಂದಿಯನ್ನು ಸೇವೆಗೆ ಹಾಜರುಪಡಿಸಿಕೊಳ್ಳಲು ಶಾಲೆಯ ಮುಖ್ಯ ಶಿಕ್ಷಕರು ನಿರಾಕರಿಸುತ್ತಿದ್ದಾರೆಂದು ಬಿಸಿಯೂಟ ತಯಾರಕ ಸಿಬ್ಬಂದಿ ಆರೋಪಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಸಿಬ್ಬಂದಿ ಮಾರ್ಥಾ, ಚನ್ನಮ್ಮ ಹಾಗೂ ತಿಪ್ಪಮ್ಮ ಅವರು, ಈ ಹಿಂದೆ ತಮ್ಮನ್ನು ಅಸಮರ್ಪಕ ಕಾರ್ಯನಿರ್ವಹಣೆಯ ಹಿನ್ನೆಲೆಯಲ್ಲಿ ದೂರು ಸಲ್ಲಿಕೆಯಾಗಿದ್ದರಿಂದ ನೇಮಕಾತಿ ಸಮಿತಿಯವರು ತಮಗೆ ತಪ್ಪೊಪ್ಪಿಗೆ ಪತ್ರ ಬರೆದುಕೊಡುವಂತೆ ಸೂಚಿಸಿದ್ದರು. ಕೆಲ ನಿಬಂಧನೆಗಳಿಗೊಳಪಟ್ಟು ಪುನಾ ಕೆಲಸಕ್ಕೆ ಹಾಜರು ಮಾಡಿಕೊಳ್ಳಲು ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕರು ನಿರ್ದೇಶಿಸಿದ್ದಾರೆಂದು ತಿಳಿಸಿದ್ದಾರೆ. ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕರ ಸೂಚನೆ ಹೊರತಾಗಿಯೂ ಗ್ರಾಮದ ಶಾಲೆಯ ಮುಖ್ಯಗುರುಗಳು ತಮ್ಮನ್ನು ಪುನಾಃ ಸೇವೆಗೆ ಹಾಜರುಪಡಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

