ನಾಳೆ ವಿಶ್ವ ಮಹಿಳೆಯರ ದಿನಾಚರಣೆ, ಜಾಥಾ
ಕನ್ನಡಪ್ರಭ ವಾರ್ತೆ, ರಾಯಚೂರು, ಮಾ.6
ವಿಶ್ವ ಮಹಿಳೆಯರ ದಿನಾಚರಣೆ ಕಾರ್ಯಕ್ರಮ ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಬೃಹತ್ ಅಂದೋಲನವನ್ನು ಮಾ.8ರಂದು ನಗರದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಯುನಿಸೆಫ್ನ ಮಕ್ಕಳ ರಕ್ಷಣಾ ಘಟಕದಿಂದ ರಂಗಮಂದಿರದಲ್ಲಿ ಆಯೋಜಿಸಿರುವ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10ಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್. ಮಿಟ್ಟಲಕೋಡ್ ಉದ್ಘಾಟಿಸಲಿದ್ದಾರೆ.
ಜಿಲ್ಲಾಧಿಕಾರಿ ಎಸ್.ಎನ್.ನಾಗರಾಜು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನ್ಯಾಯಾಧೀಶರಾದ ಜಿ.ಎ.ಮೂಲಿಮನಿ, ಎಸ್ಪಿ ಎಸ್.ಬಿ.ಬಿಸನಳ್ಳಿ, ಜಿಪಂ ಸಿಇಒ ಜ್ಞಾನ ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ರಾಜಾ ಪಾಂಡುರಂಗ ನಾಯಕ, ಸಹಾಯಕ ಆಯುಕ್ತೆ ಎನ್. ಮಂಜುಶ್ರೀ, ಡಿವೈಎಸ್ಪಿ ಡಾ. ದಿವ್ಯಾ ಗೋಪಿನಾಥ್ ಸೇರಿದಂತೆ ಅನೇಕರು ಪಾಲ್ಗೊಳ್ಳಲಿದ್ದಾರೆ.
ನಂತರ ಮಹಿಳೆಯರ ಮತ್ತು ಮಕ್ಕಳ ಸಾಕಾಣಿಕೆಯ ವಾಸ್ತವ ಸ್ಥಿತಿ ಗತಿ ಮತ್ತು ಪರಿಣಾಮಗಳ ಬಗ್ಗೆ, ಸಾಗಾಣಿಕೆ ತಡೆಗೆ ತಾಲೂಕು ಗ್ರಾಮ ಪಂಚಾಯತಿ ಮಟ್ಟದ ಕಾವಲು ಸಮಿತಿಗಳ ಪಾತ್ರದ ಬಗ್ಗೆ ಯುನಿಸೆಫ್ ಘಟಕದ ಜಿಲ್ಲಾ ಸಂಯೋಜಕ ರಾಘವೇಂದ್ರ ಭಟ್ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯಗಳ ತಡೆಗೆ ಇರುವ ಕಾನೂನು ಕ್ರಮಗಳು ಹಾಗೂ ಇತ್ತೀಚಿನ ಕಾನೂನು ತಿದ್ದುಪಡಿ ಕುರಿತು ನಂದಾ ದೇಶಪಾಂಡೆ, ಮಕ್ಕಳ ಕಲ್ಯಾಣ ಸಮಿತಿ ಧ್ಯೇಯೋದ್ದೇಶಗಳು ಮತ್ತು ದತ್ತು ಪ್ರಕ್ರಿಯೆ ಬಗ್ಗೆ ಜನ ಚೇತನ ಸಂಸ್ಥೆಯ ಅಧ್ಯಕ್ಷ ಕಿಶನ್ ರಾವ ಉಪನ್ಯಾಸ ನೀಡಲಿದ್ದಾರೆ.
ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಬಳಿ ಬೆಳಗ್ಗೆ 9ಕ್ಕೆ ಜಾಗೃತಿ ಜಾಥಾವನ್ನು ಆಯೋಜಿಸಲಾಗಿದೆ. ನಗರದ ಪ್ರಮುಖ ರಸ್ತೆಯಲ್ಲಿ ಸಾಗಿ ರಂಗಮಂದಿರ ತಲುಪಲಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

