ತಾಂತ್ರಿಕ ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದೆ ಬರಲಿ: ರೋಹಿಣಿ ರಾಣಿ
ಸಿಂಧನೂರು: ತಾಂತ್ರಿಕ ಶಿಕ್ಷಣದಲ್ಲಿ ಹೆಣ್ಣು ಮಕ್ಕಳು ಮುಂದೆ ಬರಬೇಕೆಂದು ಪೋತ್ನಾಳದ ಜೆಆರ್ಡಿ ಪಾಲಿಟೇಕ್ನಿಕ್ ಕಾಲೇಜು ಕಾರ್ಯದರ್ಶಿ ರೋಹಿಣಿ ರಾಣಿ ದೇಸಾಯಿ ಕರೆ ನೀಡಿದರು.
ಜೆಆರ್ಡಿ ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಹೆಣ್ಣುಮಕ್ಕಳು ಇಂದು ಎಲ್ಲ ರಂಗಗಳಲ್ಲಿ ಮುಂದೆ ಬರುತ್ತಿದ್ದು ತಾಂತ್ರಿಕ ಕ್ಷೇತ್ರದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬರಬೇಕು. ಜೊತೆಗೆ ಭಾರತೀಯ ಸಂಸ್ಕೃತಿಯ ಉಳಿವಿಗೆ ಎಲ್ಲರೂ ಬದ್ಧರಾಗಬೇಕು. ಹೆಣ್ಣು ಮಕ್ಕಳಿಗೆ ವಿದ್ಯಾರ್ಥಿಗಳು ಗೌರವಿಸುವುದನ್ನು ರೂಢಿಸಿಕೊಳ್ಳಬೇಕು. ಹೆಣ್ಣು ಎಂದರೆ ಕೀಳಲ್ಲ, ಅವಳು ಸಮಾಜದ ಕಣ್ಣು ಎಂದು ಹೇಳಿದರು.
ಗ್ರಾಮೀಣ ಸಂಸ್ಕೃತಿ ಮರೆಯಬೇಡಿ: ತಾಂತ್ರಿಕ ಶಿಕ್ಷಣದಲ್ಲಿ ಪದವಿ ಪಡೆದು ದೊಡ್ಡ ಊರುಗಳಲ್ಲಿ ಕೆಲಸ ಮಾಡಿದರೂ ಗ್ರಾಮೀಣ ಪ್ರದೇಶದ ಜನರನ್ನು, ಅಲ್ಲಿನ ಸಂಸ್ಕೃತಿಯನ್ನು ಮರೆಯಬಾರದು ಎಂದ ದೇಸಾಯಿ, ತಾವು ವಲ್ಕಂದಿನ್ನಿ ಗ್ರಾಮದಲ್ಲಿ ಹೊಲದಲ್ಲಿ ಪೈಪ್ಲೈನ್ ಕೆಲಸ ಮಾಡುತ್ತಿದ್ದಾಗ ತಮ್ಮೊಂದಿಗೆ ಇದ್ದವರನ್ನು ನೆನಪಿಸಿಕೊಂಡರು. ತಾವು ಪ್ರಸ್ತುತ ಬಾಂಬೆಯಲ್ಲಿ ದೊಡ್ಡ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರೂ ತಮ್ಮ ವಲ್ಕಂದಿನ್ನಿ ಗ್ರಾಮವನ್ನು, ಗ್ರಾಮಸ್ಥರನ್ನು ಗೌರವಿಸುವುದಾಗಿ ಹೇಳಿದರು.
ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಹ್ಲಾದ ಗುಡಿ ಮಾತನಾಡಿದರು. ಕಾರ್ಯಕ್ರಮವನ್ನು ಬ್ರಾಹ್ಮಣ ಸಮಾಜದ ಮಾಜಿ ಅಧ್ಯಕ್ಷ ಶೇಷಗಿರಿರಾವ್ ಚನ್ನಳ್ಳಿ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ವಿದ್ಯಾರ್ಥಿಗಳಿಗೆ ಪ್ರೋತ್ಸಾಹ: ಕಾಲೇಜು ಪ್ರಾಚಾರ್ಯ ಟಿ. ಮಂಜುನಾಥ ವಿದ್ಯಾರ್ಥಿಗಳ, ಪಾಲಕರ ಸಹಕಾರದಿಂದಾಗಿ ಕಳೆದ ಮೂರು ವರ್ಷಗಳಿಂದ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುತ್ತಿದೆ. ಈ ಕಡಿಮೆ ಅವಧಿಯಲ್ಲಿ ಸರ್ಕಾರಿ ಕಾಲೇಜುಗಳಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೂ ಕಡಿಮೆ ದರದಲ್ಲಿ ಶುಲ್ಕ ಸಂಗ್ರಹಿಸಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುತ್ತಿದೆ ಎಂದರು.
ಎಸ್ಬಿಐನ ವ್ಯವಸ್ಥಾಪಕ ಕೆ. ರಾಘವೇಂದ್ರ, ಉಪನ್ಯಾಸಕರಾದ ಶೇಕ್ಷಾವಲಿ, ಅಡಿವೇಶ, ವಿದ್ಯಾರ್ಥಿಗಳಾದ ಅಮರನಾಥ, ಪಂಕಜ್, ಪವನ, ಗೋವಿಂದಪ್ಪ, ವಿಜಯಕುಮಾರ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಶಿಕ್ಷಕ ರಾಮಣ್ಣ ಕಾರ್ಯಕ್ರಮ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

