ಹರಿಜನ, ಗಿರಿಜನರ ಮೇಲೆ ದೌರ್ಜನ್ಯ: ಆರೋಪಿಗೆ ಶಿಕ್ಷೆ
ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ಹರಿಜನರಿಗೆ ಕ್ಷೌರ ಮಾಡಲು ನಿರಾಕರಿಸಿ ಜಾತಿ ನಿಂದನೆ ಮಾಡಿದ್ದ ಇಬ್ಬರಿಗೆ ಇಲ್ಲಿನ ನ್ಯಾಯಾಲಯ ರು. 5 ಸಾವಿರ ದಂಡ ಮತ್ತು ಒಂದು ವರ್ಷ ಕಾರಾಗೃಹ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. ಸಾಲಗುಂದಾ ಗ್ರಾಮದಲ್ಲಿ 2011ರಲ್ಲಿ ಆ.17ರಂದು ಹರಿಜನರಿಗೆ ಕ್ಷೌರ ಮಾಡಲು ನಿರಾಕರಿಸಿ, ಅಂಗಡಿಗಳ ಮಾಲೀಕರು ಅಂಗಡಿ ಮುಚ್ಚಿದರು. ಈರಣ್ಣ ಮತ್ತು ಬೀರಪ್ಪ ಎಂಬುವವರು ಹರಿಜನರ ಕೇರಿಯಲ್ಲಿ ಮಾತನಾಡುತ್ತಾ ನಿಂತಿದ್ದ ಹುಲಿಗೆಪ್ಪನೊಂದಿಗೆ ಜಗಳ ತೆಗೆದು, ಜಾತಿಯಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದರು. ಈ ಬಗ್ಗೆ ಹುಲಿಗೆಪ್ಪ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಅಪರ ಸತ್ರ ನ್ಯಾಯಾಧೀಶ ಆರ್.ಜೆ. ಸತೀಶಸಿಂಗ್ ಅವರು ಪ್ರಕರಣದ ವಿಚಾರಣೆ ನಡೆಸಿ ಈರಣ್ಣ ಹಾಗೂ ಬೀರಪ್ಪ ಅವರಿಗೆ ತಲಾ ರು. 5 ಸಾವಿರ ದಂಡ ಹಾಗೂ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ್ದಾರೆ.
ಬೆಂಕಿಗೆ ಮನೆ ಭಸ್ಮ
ಸುರಪುರ: ಸಮೀಪದ ರಂಗಂಪೇಟೆ ದೂಲಪೇಟ ಮೊಹಲ್ಲಾದಲ್ಲಿ ಬುಧವಾರ ಸಂಜೆ ಆಕಸ್ಮಿಕ ಬೆಂಕಿ ತಗುಲಿ ಮನೆಯೊಂದು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂದ್ರಕಾಂತ ಎಂಬುವರಿಗೆ ಸೇರಿದ್ದ ಮನೆಯೇ ಇದಾಗಿದೆ. ಬೆಂಕಿ ದುರಂತದಿಂದ ಮನೆಯಲ್ಲಿದ್ದ ಬಟ್ಟೆ, ಅಕ್ಕಿ, ಜೋಳ, ಬೇಳೆ ಸೇರಿದಂತೆ ಇತರ ದಿನಬಳಕೆ ವಸ್ತುಗಳು ಸಂಪೂರ್ಣವಾಗಿ ಸುಟ್ಟಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

