ಮತಗಟ್ಟೆ ಸ್ಥಳಾಂತರಕ್ಕೆ ವಿರೋಧ
ರಾಯಚೂರು: ಇಲ್ಲಿನ ನಗರಸಭೆ ಚುನಾವಣೆ ವೇಳೆ ಮತಗಟ್ಟೆ ಸ್ಥಳಾಂತರಿಸಿದ ಜಿಲ್ಲಾಡಳಿತದ ಕ್ರಮವನ್ನು ಮತದಾರರು ಖಂಡಿಸಿದ ಘಟನೆ ನಡೆದಿದೆ. 33ನೇ ವಾರ್ಡಿನ ಮತದಾರರು ಯರಮರಸ್ ದಂಡು ಪ್ರದೇಶದಲ್ಲಿ ಮತದಾನ ಕೆಲಹೊತ್ತು ಬಹಿಷ್ಕರಿಸಿ ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಅನೇಕ ಚುನಾವಣೆ ಸಂದರ್ಭದಲ್ಲಿ ಯರಮರಸ್ ದಂಡು ಪ್ರದೇಶದಲ್ಲಿಯೇ ಮತಗಟ್ಟೆ ಸ್ಥಾಪಿಸಲಾಗಿತ್ತು. ಆದರೆ ಈ ಬಾರಿ ಮತಗಟ್ಟೆಯನ್ನು ಬೇರೆಡೆಗೆ ಸ್ಥಳಾಂತರಿಸಿದ್ದು ಸರಿಯಾದ ಕ್ರಮವಲ್ಲ. ಇದರಿಂದ ಮತದಾರರಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಮತದಾನಕ್ಕೆ ಮುಂದಾಗಲಿಲ್ಲ. ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಮತದಾರರ ಮನವೊಲಿಸಿದ ನಂತರ ಮತದಾರರ ತಮಗೆ ಸೂಚಿಸಿದ ಮತಗಟ್ಟೆಯಲ್ಲಿ ಮತದಾನ ಮಾಡಿದರು.
---
ಮತ ಯಂತ್ರ ದೋಷ; ವಿಳಂಬ
ರಾಯಚೂರು: ನಗರದಲ್ಲಿ ಗುರುವಾರ ನಡೆದ ನಗರಸಭೆಯ ಚುನಾವಣೆಯಲ್ಲಿ ಎರಡು ವಾರ್ಡುಗಳ ಮತಗಟ್ಟೆಗಳಲ್ಲಿ ಮತಯಂತ್ರ ಕೈಕೊಟ್ಟಿದ್ದರಿಂದ ಕೆಲಕಾಲ ಮತದಾನ ಸ್ಥಗಿತಗೊಂಡಿತ್ತು.
ನಗರದ 2 ಮತ್ತು 26ನೇ ವಾರ್ಡಿನಲ್ಲಿ ಬೆಳಗ್ಗೆ ಮತದಾನ ಆರಂಭವಾಗುತ್ತಿದ್ದಂತೆಯೇ ದೋಷ ಕಂಡುಬಂದಿದ್ದರಿಂದ ಮತದಾನ ವಿಳಂಬವಾಯಿತು. ಈ ವೇಳೆ ಅಧಿಕಾರಿಗಳು ಮತಯಂತ್ರಗಳನ್ನು ಬದಲಿಸುವ ಮೂಲಕ ಮತದಾನಕ್ಕೆ ಅವಕಾಶ ಮಾಡಿಕೊಟ್ಟ ನಂತರದಲ್ಲಿ ಮತದಾನ ಸುಗಮವಾಗಿ ಸಾಗಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

