ರಾಯಚೂರು

ಇಂದು ಮಹಿಳಾ ಸಬಲೀಕರಣ ಕಾರ್ಯಕ್ರಮ

Published On :

ಮುದಗಲ್: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ, ನಗರ, ಪುರ, ಪಟ್ಟಣ ಪಂಚಾಯಿತಿಗಳಲ್ಲಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಮೂಲಕ ಸ್ತ್ರೀ ಶಕ್ತಿಯನ್ನು ಹೆಚ್ಚಿಸಿದೆ. ಆದರೆ ಮಹಿಳೆಯರು ಆಡಳಿತದಲ್ಲಿ ಧ್ವನಿಯಾಗುವ ಸಲುವಾಗಿ ಗುಡಿಹಾಳ ಗ್ರಾಮದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಪರಿವರ್ತನ ಟ್ರಸ್ಟ್ ಬೆಂಗಳೂರನ ಮಲ್ಲೇಶಗೌಡ ತಿಳಿಸಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭಾರತ ದೇಶದ ಸಂಸ್ಕೃತಿ ಉಳಿದಿದ್ದರೆ ಅದು ಮಹಿಳೆಯರಿಂದ, ಮಹಿಳೆಯರಿಗೆ ಪುರುಷರು ಹೆಚ್ಚಿನ ಪ್ರೋತ್ಸಾಹ ನೀಡಬೇಕು, ಪಂಚಾಯಿತಿಗಳಲ್ಲಿ ಮಹಿಳಾ ಸದಸ್ಯರಿಗೆ ಪ್ರಾತಿನಿಧ್ಯ ನೀಡಬೇಕು, ಪಂಚಾಯಿತಿ ಆಡಳಿತ ಹೇಗೆ ನಡೆಸಬೇಕು ಎನ್ನುವ ಕುರಿತು ಮಹಿಳಾ ಸಬಲೀಕರಣ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಯುದ್ಧ ವಿಮಾನ ವಿನ್ಯಾಸಕರು ಭಾರತ ಸರ್ಕಾರದ ಶೈಲಶ್ರೀ ಹಂಜಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಆರ್.ಇಂದಿರಾ, ಲಿಂಗಸ್ಗೂರು ನ್ಯಾಯಾಲಯದ ಸರ್ಕಾರಿ ಆಭಿಯೋಜಕಿ ಸರಸ್ವತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡುವರು. ಭಾನುವಾರ ಬೆಳಗ್ಗೆ 9ಕ್ಕೆ ನಡೆಯಲಿರುವ ಈ ಕಾರ್ಯಕ್ರಮವನ್ನು ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ತಾಪಂ ಅಧ್ಯಕ್ಷೆ ಲಲಿತಾಬಾಯಿ ಶಿವನಗೌಡ, ಮಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಂಡಮ್ಮ, ಸದಸ್ಯೆ ನಿರ್ಮಲಾ, ಗೌಶಿಯಾಬೇಗಂ ಇರುವರು, ಸ್ತ್ರೀಶಕ್ತಿ ಗುಂಪಿನ ಮಹಿಳೆಯರು ಭಾಗವಹಿಸುವರು ಎಂದು ಮಲ್ಲೆಶಗೌಡ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.