ಕಾಮಗಾರಿಗೆ ಯಂತ್ರಗಳ ಬಳಕೆ ಕ್ರಮಕ್ಕೆ ಆಗ್ರಹ
ರಾಯಚೂರು: ಮಾನವಿ ತಾಲೂಕಿನ ನೀರಮಾನ್ವಿ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡದೇ ಯಂತ್ರಗಳ ಸಹಾಯದಿಂದ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕೂಡಲೇ ಇಂಥವರ ವಿರುದ್ಧ ಜಿಪಂ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಮುಖಂಡ ಹೋಪಾಲ ನಾಯಕ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಉದ್ಯೋಗ ಖಾತ್ರಿ ಯೋಜನೆ ಅಡಿ ಗ್ರಾಪಂ ನಲ್ಲಿ ಕೈಗೊಳ್ಳುತ್ತಿರುವ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಸಲಾಗುತ್ತಿದೆ. ಆ ಮೂಲಕ ಕೂಲಿಕಾರ್ಮಿಕರಿಗೆ ವಂಚಿಸಲಾಗುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಕೂಲಿ ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾರೆ.
2012-13ನೇ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿಗಳನ್ನು ಯಂತ್ರಗಳ ಮೂಲಕ ಪೂರೈಸಲಾಗಿದೆ. ಕೂಲಿ ಕಾರ್ಮಿಕರಿಗೆ ಮತ್ತು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡುವ ಕಾರ್ಯವನ್ನು ಅಧಿಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಮಾಡಿದ್ದು ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನೀರಮಾನ್ವಿ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿಕಾರ್ಮಿಕರಿಗೆ ಉದ್ಯೋಗ ದೊರಕಿಸಿ ಕೊಡಬೇಕು. ಯಾವುದೇ ಕಾರಣಕ್ಕೂ ಕಾಮಗಾರಿಗಳಿಗೆ ಯಂತ್ರಗಳನ್ನು ಬಳಸಬಾರದು. ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ತಾಪಂ ಎದುರು ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಜವಳಗೇರಾ ಆರೋಗ್ಯ ಕೇಂದ್ರ ವಸತಿ ಗೃಹ ಉದ್ಘಾಟನೆ
ಸಿಂಧನೂರು: ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಶಾಸಕ ವೆಂಕಟರಾವ್ ನಾಡಗೌಡ ನೂತನ ವಸತಿ ಗೃಹಗಳನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು ಎನ್ಆರ್ಎಚ್ಎಂ ಯೋಜನೆ ಅಡಿಯಲ್ಲಿ ನಿರ್ಮಿಸಲಾದ 4 ನೂತನ ವಸತಿ ಗೃಹಗಳು ಉತ್ತಮ ಗುಣಮಟ್ಟದ್ದಾಗಿವೆ. ಕಳೆದ ಅನೇಕ ವರ್ಷಗಳಿಂದ ಇಲಾಖೆಯ ವಸತಿ ಗೃಹಗಳು ಮಳೆ ಬಂದರೆ ಇರದಂತ ಸ್ಥಿತಿಯಲ್ಲಿದ್ದವು. ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿ ವರ್ಗದವರ ತೊಂದರೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚೆಸಿ 4 ವಸತಿ ಗೃಹಗಳನ್ನು ಮಂಜೂರಿ ಮಾಡಿಸಿ ಕಟ್ಟಡ ಪೂರ್ಣಗೊಳಿಸಲಾಗಿದೆ. ಇದರಂತೆ ಇನ್ನುಳಿದ ಸಿಬ್ಬಂದಿಗೂ ವಸತಿ ಸೌಕರ್ಯ ಕಲ್ಪಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ನಗರಸಭೆ ನೂತನ ಸದಸ್ಯ ಬಸವರಾಜ ನಾಡಗೌಡ, ಗ್ರಾಪಂ ಉಪಾಧ್ಯಕ್ಷ ರಂಗಪ್ಪ ಭೋವಿ, ಎಂ.ಅಮರೇಶ, ಕೆ. ಸೂಗಪ್ಪ, ಎಚ್. ಅಮರೇಗೌಡ, ಎಂ. ಗಂಗಣ್ಣ, ರಾಮಣ್ಣ ಉರಲಗಡ್ಡಿ, ಡಾ. ಭಾಗೀರಥಿ, ಬಿಎಚ್ಇಓ ಬಸಯ್ಯ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ರಾಧಾ ರವಿಕುಮಾರ ವಹಿಸಿದ್ದರು. ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರು ಪ್ರಾಸ್ತಾವಿಕ ಮಾತನಾಡಿ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

