ರಾಯಚೂರು

ಶೇಂಗಾಕ್ಕೆ ಬೆಂಬೆಲೆ ಘೋಷಿಸಲು ಒತ್ತಾಯ

Published On :

ಯಾದಗಿರಿ: ಶೇಂಗಾ ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಜಿಲ್ಲಾ ಟೋಕರಿ ಕೋಲಿ ಕಬ್ಬಲಿಗ ಸಮಾಜದ ವತಿಯಿಂದ ನೂರಾರು ರೈತರು ಮಂಗಳವಾರ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು.
ನಗರದ ಸುಭಾಷ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಉಮೇಶ ಮುದ್ನಾಳ, ಕಳೆದ ಸಾಲಿನಲ್ಲಿ  ಶೇಂಗಾಗೆ ಉತ್ತಮ ಬೆಲೆ ಸಿಕ್ಕಿತ್ತು. ಆದ್ದರಿಂದ ಈ ಸಲವೂ ರೈತರು # 10-12 ಸಾವಿರಕ್ಕೆ ಒಂದು ಕ್ವಿಂಟಲ್ ಬೀಜ ಖರೀದಿಸಿ ಬಿತ್ತನೆ ಮಾಡಿ ಶೇಂಗಾ ಬೆಳೆದಿದ್ದಾರೆ. ಆದರೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಕೈಸುಟ್ಟುಕೊಳ್ಳುವಂತಾಗಿದೆ. ಅದಕ್ಕಾಗಿ ಸರ್ಕಾರ ಮಧ್ಯ ಪ್ರವೇಶ ಮಾಡಿ ಪ್ರತಿ ಕ್ವಿಂಟಲ್‌ಗೆ # 6 ಸಾವಿರ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಆಗ್ರಹಿಸಿದರು.
ಕ್ರಮ ಜರುಗಿಸಿ: ಒಂದು ವೇಳೆ ಸರ್ಕಾರ ಬೆಂಬಲ ಬೆಲೆ ಘೋಷಣೆ ಮಾಡದಿದ್ದಲ್ಲಿ ರೈತರು ತಾವು ಮಾಡಿದ ಸಾಲ ತೀರಿಸಲಾಗದೇ ಆತ್ಮಹತ್ಯೆಗೆ ಮುಂದಾಗಬೇಕಾಗುತ್ತದೆ. ಅದಕ್ಕಾಗಿ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಸಿ ಸೂಕ್ತ ಕ್ರಮ ಜರಗಿಸಲು ಮುಂದಾಗಬೇಕು. ರೈತರಿಗೆ ಹನಿ ನೀರಾವರಿ ಸಾಮಗ್ರಿಗಳನ್ನು ಶೇ.90ರ ರಿಯಾಯ್ತಿ ದರದಲ್ಲಿ ವಿತರಣೆ ಮಾಡಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಶೇ.75  ರಿಯಾಯತಿ ದರದಲ್ಲಿ ರಸಗೊಬ್ಬರವನ್ನು ನೀಡಬೇಕು. ರೈತರು ಬೆಳೆದ ಬೆಳೆಯನ್ನು ಕೃಷಿ ಮಾರುಕಟ್ಟೆಗೆ ಆಟೋ ಮತ್ತು ಟ್ರಾಕ್ಟರ್‌ಗಳಲ್ಲಿ ಸಾಗಿಸುವ ಸಂದರ್ಭದಲ್ಲಿ ಪೊಲೀಸರ ಕಿರುಕುಳ  ಹೆಚ್ಚಾಗಿದ್ದು, ತಕ್ಷಣ ಅದನ್ನು ತಡೆಗಟ್ಟಲು ಕ್ರಮ ಜರಗಿಸಬೇಕು. ಜಿಲ್ಲಾದ್ಯಂತ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟದಿಂದ ರೈತರ ಬದುಕು ಹಾಳಾಗುತ್ತಿದ್ದು ಕೂಡಲೇ ಇದಕ್ಕೆ ಕಡಿವಾಣ ಹಾಕಬೇಕು ಎಂಬ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಶಿವು ಮತ್ಯಾ ಟೋಕಾಪುರ, ಸಾಯಬಣ್ಣ ಹತ್ತಿಕುಣಿ, ಸಿದ್ದಪ್ಪ ನಾಲಡಗಿ, ಬಸವರಾಜ ಮುದ್ನಾಳ, ಯಲ್ಲಪ್ಪ ಹೊಂಟೂರ, ಮರೆಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.