ಪಿಯು ಪರೀಕ್ಷೆ: 25,632 ವಿದ್ಯಾರ್ಥಿಗಳು
ಗುಲ್ಬರ್ಗ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ.13ರ ಬುಧವಾರದಿಂದ ಆರಂಭವಾಗಿ ಮಾ. 28ರ ವರೆಗೂ ನಡೆಯಲಿವೆ. ಗುಲ್ಬರ್ಗ ಜಿಲ್ಲೆಯಲ್ಲಿ ಒಟ್ಟು 40 ಪರೀಕ್ಷಾ ಕೇಂದ್ರಗಳಿದ್ದು, ನಗರದಲ್ಲಿ 22 ಹಾಗೂ ತಾಲೂಕು ಮತ್ತು ಗ್ರಾಮಾಂತರ ಪ್ರದೇಶದಲ್ಲಿ 18 ಪರೀಕ್ಷಾ ಕೇಂದ್ರಗಳಿವೆ.
ಗುಲ್ಬರ್ಗ ಜಿಲ್ಲೆಯ 179 ಪದವಿಪೂರ್ವ ಕಾಲೇಜುಗಳ 25, 632 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 40 ಪರೀಕ್ಷಾ ಕೇಂದ್ರಗಳಿಗಾಗಿ 19 ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವಿಶೇಷ ವೀಕ್ಷಕರೆಂದು ನೇಮಿಸಲಾಗಿದೆ.
ಜಿಲ್ಲೆಯಲ್ಲಿ 8 ಪರೀಕ್ಷಾ ಕೇಂದ್ರಗಳನ್ನು ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ. ಈ ಪರೀಕ್ಷಾ ಕೇಂದ್ರಗಳಲ್ಲಿ ಜಾಗೃತ ಅಧಿಕಾರಿಗಳಿಗೆ ಸೂಕ್ಷ್ಮತೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಿ ವ್ಯವಸ್ಥಿತ ರೀತಿಯಲ್ಲಿ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪರೀಕ್ಷೆಗಳನ್ನು ಶಾಂತಿಯುತವಾಗಿ ನಡೆಸುವ ಹಿನ್ನೆಲೆಯಲ್ಲಿ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಕಲಂ 144ರಡಿ ನಿಷೇದಾಜ್ಞೆ ಜಾರಿಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳ ಆಸುಪಾಸಿನ ಝಿರಾಕ್ಸ್ ಅಂಗಡಿಗಳು, ಪುಸ್ತಕ ಮಳಿಗೆಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಗೆದುಕೊಂಡು ಹೋಗಬಾರದೆಂದು ಜಿಲ್ಲಾಧಿಕಾರಿ ಎನ್.ಎಸ್.ಪ್ರಸನ್ನಕುಮಾರ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಜಾರಿ
ಗುಲ್ಬರ್ಗ: ಜಿಲ್ಲೆಯಾದ್ಯಂತ ಮಾ. 13ರಿಂದ 28ರವರೆಗೆ ಗುಲ್ಬರ್ಗ ನಗರ ಹಾಗೂ ತಾಲೂಕಿನ 40 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ. ಪರೀಕ್ಷೆಗಳು ಸುಗಮ ರೀತಿಯಲ್ಲಿ ನಡೆಯಲು ಅನುಕೂಲವಾಗುವಂತೆ 1973ರ ಸಿಆರ್ಪಿಸಿ ಕಲಂ 144 ಅಡಿ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ ಅವರು ಮಾ. 13ರಿಂದ ಮಾ. 28ರವರೆಗೂ ಪರೀಕ್ಷೆ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಸಂಬಂಧಪಟ್ಟ ವ್ಯಕ್ತಿಗಳನ್ನು ಹೊರತು ಪಡಿಸಿ ಬೇರೆ ಯಾವುದೇ ವ್ಯಕ್ತಿಗಳು ಪರೀಕ್ಷೇ ಕೇಂದ್ರದ ಬಳಿಯಲ್ಲಿ ಪ್ರವೇಶ ಮಾಡದಂತೆ ಮತ್ತು ಜೆರಾಕ್ಸ್ ಅಂಗಡಿಗಳನ್ನು, ಪುಸ್ತಕ ಮಳಿಗೆಗಳನ್ನು ಮುಚ್ಚಲು ಸೂಚಿಸಿದ್ದಾರೆ. ಸದರಿ ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ಪರೀಕ್ಷೆ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಸಿಬ್ಬಂದಿ ಸೇರಿದಂತೆ ಯಾವುದೇ ವ್ಯಕ್ತಿಗಳು ಹಾಗೂ ಅಭ್ಯರ್ಥಿಗಳು ಮೊಬೈಲ್ ಬಳಸದಂತೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

