ರಾಯಚೂರು

ನಕಲಿಗೆ ಅವಕಾಶ ಇಲ್ಲ: ಬಸವರಾಜ

Published On :

ಮುದಗಲ್: ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತದೆ. ನಕಲಿಗೆ ಯಾವುದೇ ಅವಕಾಶ ನೀಡುವುದಿಲ್ಲ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥ ಬಸವರಾಜ ಹೇಳಿದರು.
ಬುಧವಾರ ಇತಿಹಾಸ ವಿಷಯ ಪರೀಕ್ಷೆ ನಡೆಯಿತು. ಒಟ್ಟು 440 ವಿದ್ಯಾರ್ಥಿಗಳ ಪೈಕಿ 421 ವಿಧ್ಯಾರ್ಥಿಗಳು  ಹಾಜರಾಗಿದ್ದಾರೆ. 19 ವಿದ್ಯಾರ್ಥಿಗಳು ಗೈರಾಗಿದ್ದರು. ಈ ಪರೀಕ್ಷಾ ಕೇಂದ್ರದಲ್ಲಿ ಸಜ್ಜಲಗುಡ್ಡ, ನಾಗರಹಾಳ, ಖೈರವಾಡಗಿ, ಮುದಗಲ್ ಅನ್ನದಾನಗೌಡ ಪಾಟೀಲ್ ಕಾಲೇಜು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
ಇಬ್ಬರು ಮೊಬೈಲ್ ಸ್ಕ್ವಾಡ್ ಮತ್ತು ಕೊಠಡಿ ಮೇಲ್ವೀಚಾರಕರನ್ನು ನೇಮಿಸಲಾಗಿದೆ. ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ವ್ಯವಸ್ಥೆ ಮಾಡಲಾಗಿದೆ. ಸುಗಮವಾಗಿ ಪರೀಕ್ಷೆ ಬರೆಯಲು ಅನುಕೂಲ ಮಾಡಲಾಗಿದ್ದು, ಕಾಲೇಜಿನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.