ರಾಯಚೂರು

ಮಾಸಾಶನ ಅರ್ಜಿ ಗೊಂದಲ; ವೃದ್ಧರ ಪರದಾಟ

Published On :

ಕನ್ನಡಪ್ರಭ ವಾರ್ತೆ ಲಿಂಗಸ್ಗೂರು ಮಾ.14
ಸರ್ಕಾರದಿಂದ ಮಾಸಾಶನ ಪಡೆಯಲು ಅರ್ಜಿ ಸಲ್ಲಿಸಿ ಹಲವು ತಿಂಗಳು ಕಳೆದರೂ ಅಧಿಕಾರಿಗಳು ಆದೇಶ ಪ್ರತಿ ನೀಡದೆ ನಿರ್ಲಕ್ಷ್ಯ ತೋರಿದ್ದರಿಂದ ಪರದಾಡುವಂತಾಗಿದೆ ಎಂದು ವೃದ್ಧರು ಆರೋಪಿಸಿದರು.
ತಾಲೂಕಿನ ಕಡದರಗಡ್ಡಿ ಗ್ರಾಮದ ವೃದ್ಧರು ಮತ್ತು ವಿಧವೆಯರು ಸೇರಿದತೆ ಒಟ್ಟು 11 ಜನರು ಸಂಧ್ಯಾ ಸುರಕ್ಷಾ, ವಿಧವಾ ವೇತನ ಪಡೆಯಲು ಸಂಬಂಧಿಸಿದ ನೆಮ್ಮದಿ ಕೇಂದ್ರದಲ್ಲಿ ಸೆ.29, 2012 ರಂದು ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ಕುರಿತು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರಿಗೆ ಮಾಹಿತಿ ಕೇಳಿದರೆ ನಾಡ ತಹಸೀಲ್ದಾರ್ ಕಚೇರಿಗೆ ಕಳುಹಿಸಿ ಕೊಡಲಾಗಿದೆ ಎಂದು ಉತ್ತರ ನೀಡುತ್ತಿದ್ದಾರೆ.
ನಾಡ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ ನಾಡ ತಹಸೀಲ್ದಾರರನ್ನು ವಿಚಾರಿಸಿದರೆ ನಮಗೆ ಯಾವುದೇ ಅರ್ಜಿಗಳ ಮಾಹಿತಿ ಇರುವುದಿಲ್ಲವೆಂದು ಹೇಳುತ್ತಿದ್ದಾರೆ. ಇದರಿಂದ ದಿಕ್ಕುತೋಚದೆ ಕಚೇರಿಗೆ ಅಲೆದಾಡುವಂತಾಗಿದೆ. ಕೂಡಲೇ ಕ್ರಮ ಕೈಗೊಳ್ಳುವಂತೆ ಕಡದರಗಡ್ಡಿ ಗ್ರಾಮದ ದುರುಗಮ್ಮ ಅಂತರಗಂಗಿ, ಯಲ್ಲಮ್ಮ, ದುರುಗಮ್ಮ ಪೂಜಾರಿ, ಚಂದಪ್ಪ, ಭೀಮಶೆಪ್ಪ, ಚಂದಮ್ಮ, ಬಸಪ್ಪ ವಕ್ರಾಣಿ ಸೇರಿದಂತೆ ಸಹಾಯಕ ಆಯುಕ್ತರಿಗೆ ಗುರುವಾರ ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.