ವಿದ್ಯುದ್ದೀಕರಣ; ಜನತೆಗೆ ಎಚ್ಚರಿಕೆ
ರಾಯಚೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ತಾಲೂಕಿನ ಚಿಕ್ಕಸ್ಗೂರು 110 ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಶಕ್ತಿನಗರದ 110 ಕೆ.ವಿ. ವಿದ್ಯುತ್ ಉಪ ಕೇಂದ್ರದವರೆಗಿನ ವಿದ್ಯುತ್ ಮಾರ್ಗವನ್ನು ಮಾ.16ರಿಂದ ವಿದ್ಯುದ್ದೀಕರಣ ಮಾಡಲಾಗುತ್ತಿದೆ ಎಂದು ವಿದ್ಯುತ್ ಪ್ರಸರಣ ನಿಗಮ ತಿಳಿಸಿದೆ. ಈ ವಿದ್ಯುತ್ ಮಾರ್ಗವು ಕೆಇಎಡಿಬಿ, ಕೈಗಾರಿಕಾ ಪ್ರದೇಶ, ಚಿಕ್ಕಸ್ಗೂರು, ಹೆಗ್ಗಸನಳ್ಳಿ, ಯದ್ಲಾಪುರ, ಶಕ್ತಿನಗರ ಗ್ರಾಮದ ಸರಹದ್ದಿನಲ್ಲಿ ಹಾದು ಹೋಗುತ್ತಿದ್ದು, ಸಾರ್ವಜನಿಕರು ಈ ಮಾರ್ಗಗಳ ವಿದ್ಯುತ್ ಗೋಪುರಗಳನ್ನು ಏರುವುದು, ಜಾನುವಾರುಗಳನ್ನು ಕಟ್ಟಿ ಹಾಕುವುದು ಸೇರಿದಂತೆ ವಿವಿಧ ರೀತಿಯಿಂದ ಗೋಪುರಗಳನ್ನು ಮುಟ್ಟದಂತೆ ಎಚ್ಚರಿಸಿದೆ. ಸಾರ್ವಜನಿಕರ ಆಸ್ತಿಗೆ ಅಂಥ ಕೃತ್ಯದಿಂದ ಹಾನಿಯಾದಲ್ಲಿ ಅಪರಾಧ ಎಸಗಿದವರೇ ಜವಾಬ್ದಾರರಾಗುತ್ತಾರೆ. ಇದಕ್ಕೆ ಕೆಪಿಟಿಸಿಎಲ್ ಹೊಣೆಯಲ್ಲವೆಂದು ನಿಗಮ ತಿಳಿಸಿದೆ.
--
ಆಕಸ್ಮಿಕ ಬೆಂಕಿ ತಗುಲಿ ಮಹಿಳೆ ಸಾವು
ರಾಯಚೂರು: ಸಿಂಧನೂರು ತಾಲೂಕಿನ ಶ್ರೀಪುರಂ ಜಂಕ್ಷನ್ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮಹಿಳೆಯೊಬ್ಬ ಸಾವಿಗೀಡಾಗಿದ್ದಾಳೆ. ಮೃತಳನ್ನು ದುರುಗವ್ವ ಎಂದು ಗುರುತಿಸಲಾಗಿದೆ. ಈಕೆ ಮನೆಯಲ್ಲಿ ಸ್ಟೋವಿನಲ್ಲಿ ಅಡುಗೆ ಮಾಡುತ್ತಿರುವಾಗ, ಆಕಸ್ಮಿಕ ಬೆಂಕಿ ಸೀರೆಗೆ ತಗುಲಿ ಆಕೆಗೆ ಸುಟ್ಟ ಗಾಯಗಳಾಗಿದ್ದವು. ಚಿಕಿತ್ಸೆಗೆ ಸಿಂಧನೂರಿನ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ನಂತರ ಬಳ್ಳಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ವೇಳೆ ಆಕೆ ಸಾವಿಗೀಡಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜು; 7 ಜನರ ಬಂಧನ
ರಾಯಚೂರು: ಮಾನವಿ ತಾಲೂಕಿನ ಚಾಗಬಾವಿ ಗ್ರಾಮದಲ್ಲಿ ಜೂಜಾಡುತ್ತಿದ್ದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಗ್ರಾಮದ ಶಾಂತಮೂರ್ತಿ ಮತ್ತಿತರ ಆರು ಜನರೆಂದು ಗುರುತಿಸಲಾಗಿದೆ. ಇವರು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರಿಂದ 15,550 ಹಾಗೂ 7 ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

