ರಾಯಚೂರು

ಇಂದು ದಿನಾಚರಣೆ

Published On :

ರಾಯಚೂರು: ನಗರದ ಐಎಂಎ ಹಾಲ್‌ನಲ್ಲಿ ಮಾ.16ರಂದು ವಿಶ್ವ ಗ್ರಾಹಕರ ದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಸಮಾರಂಭವನ್ನು ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಬಾಂಡ್ ವಿತರಣೆ
ಸಿಂಧನೂರು: ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಯೋಜನೆಯಡಿ ವಲಯ ಮಟ್ಟದಲ್ಲಿ ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್‌ಗಳ ವಿತರಣಾ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಶಾಸಕ ವೆಂಕಟರಾವ್ ನಾಡಗೌಡ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷೆ ರಾಧಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಂಗಪ್ಪ ಭೋವಿ, ಗ್ರಾಪಂ ಉಪಾಧ್ಯಕ್ಷ ಕೆ.ಸೂಗಪ್ಪ, ಎಂ.ಅಮರೇಶ, ಕೆ.ಮಿಯಾಸಾಬ, ಎಚ್.ಸಂಗನಗೌಡ, ಎಂ.ಆದಯ್ಯ, ಯಂಕೋಬ ಕಲ್ಲೂರು, ಲಕ್ಷ್ಮೀ ದಿದ್ದಗಿ, ಶರಣಪ್ಪ ಜಿನೆಕಲ್, ಕೆ.ಮುತ್ತಣ್ಣ, ಯಂಕಪ್ಪಚುವರಿ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು. ಕಮಲಮ್ಮ ಹಾಗೂ ಇಂದಿರಮ್ಮ ಪ್ರಾರ್ಥಿಸಿದರು. ಸಿಡಿಪಿಒ ಹನುಮಂತಪ್ಪ ಓಲೇಕಾರ ಸ್ವಾಗತಿಸಿದರು. ಗ್ರಾಪಂ ಮಾಜಿ ಸದಸ್ಯ ಎಂ. ಚಂದ್ರಶೇಖರ ನಿರೂಪಿಸಿದರು.
ನೋಂದಣಿ; ಸೂಚನೆ
ರಾಯಚೂರು: ಜಿಲ್ಲೆಯಲ್ಲಿರುವ ಸರಕು ಸಾಗಾಣಿಕೆ ವಾಹನ ಮಾಲೀಕರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಿಂದ ನೋಂದಣಿ ಪ್ರಮಾಣ ಪತ್ರ ಪಡೆಯಲು ಸಾರಿಗೆ ಇಲಾಖೆ ಸೂಚಿಸಿದೆ. ಈ ನಿಟ್ಟಿನಲ್ಲಿ ಮಾಲಿಕರು ನಿರ್ಲಕ್ಷ್ಯ ತೋರಿದಲ್ಲಿ ಅಪರಾಧಕ್ಕಾಗಿ ದಂಡ ವಿಧಿಸಲಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.