ರಾಯಚೂರು

ಹಂಪನಾಳದಲ್ಲಿ ಹತೋಟಿಗೆ ಬಾರದ ವಾಂತಿ- ಭೇದಿ

Published On :

ಸಿಂಧನೂರು: ತಾಲೂಕಿನ ಹಂಪನಾಳ ಗ್ರಾಮದಲ್ಲಿ ಗುರುವಾರ ರಾತ್ರಿ ಮತ್ತೆ ವಾಂತಿ- ಭೇದಿ ಪ್ರಕರಣಗಳು ಕಾಣಿಸಿಕೊಂಡಿದ್ದು, ಶುಕ್ರವಾರ ಬೆಳಗ್ಗೆ ಸಿಂಧನೂರು ಸರ್ಕಾರಿ ಆಸ್ಪತ್ರೆಗೆ ಸುಮಾರು 12 ಜನ ಗ್ರಾಮಸ್ಥರು ಚಿಕಿತ್ಸೆಗೆ ದಾಖಲಾಗಿದ್ದಾರೆ.
ಹುಲಿಗೆಮ್ಮ ಗಂಡ ದುರುಗಪ್ಪ, ಗಂಗಮ್ಮ ಗಂಡ ಸಿದ್ದನಗೌಡ, ಅಮರಮ್ಮ ಗಂಡ ಬಸವರಾಜ, ಬಾಲಕ ಮಂಜುನಾಥ ತೀವ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಲಾಗಿದೆ.
ಗ್ರಾಮದಲ್ಲಿ ಕುಡಿವ ನೀರಿನ ಪೈಪ್‌ಲೈನ್ ಒಡೆದಿದ್ದರ ಪರಿಣಾಮವಾಗಿ ಕಳೆದೊಂದು ವಾರದಿಂದ ಸುಮಾರು 60ಕ್ಕೂ ಹೆಚ್ಚು ಗ್ರಾಮಸ್ಥರು ವಾಂತಿ- ಭೇದಿಯಿಂದ ನರಳಿ ಚಿಕಿತ್ಸೆ ಪಡೆದಿದ್ದಾರೆ. ಪುನಃ ಗುರುವಾರ ರಾತ್ರಿ ರೋಗ ಉಲ್ಬಣಿಸಿದ್ದರಿಂದ ತಾಲೂಕು ಆರೋಗ್ಯ ಅಧಿಕಾರಿ ಸೈಯ್ಯದ್ ಹಸೇನ್ ಹುಸೇನ್ ಸೇರಿದಂತೆ ಅನೇಕ ಸಿಬ್ಬಂದಿ ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ. ಗ್ರಾಮದ ಜನರಲ್ಲಿ ರೋಗದ ಬಗ್ಗೆ ಆತಂಕ ಉಂಟಾಗಿದೆ.
ಜಿಲ್ಲಾ ಆರೋಗ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಗ್ರಾಮಸ್ಥರಿಗೆ ಹೆಚ್ಚಿನ ತಿಳಿವಳಿಕೆ ನೀಡಬೇಕೆಂದು ಗ್ರಾಮಸ್ಥರ ಪರವಾಗಿ ಬಸವರಾಜ, ವೆಂಕಟೇಶ, ಎನ್‌ಸಿಪಿ ಜಿಲ್ಲಾಧ್ಯಕ್ಷ ಯೇಸುರಾಜ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.