ಅಭಿವೃದ್ಧಿ ಕಾರ್ಯ ಮೆಚ್ಚಿ ಬಿಜೆಪಿಗೆ ಜನಬೆಂಬಲ
ದೇವದುರ್ಗ: ಶಾಸಕ ಕೆ.ಶಿವನಗೌಡ ನಾಯಕರ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿರುವ ಮತದಾರರು ಪುರಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಸ್ವಷ್ಟ ಬಹುಮತ ನೀಡಿದ್ದಾರೆಂದು ಬಿಜೆಪಿ ಮುಖಂಡ ವೆಂಕಟೇಶ ಪೂಜಾರಿ ಹೇಳಿದರು.
ಪಟ್ಟಣದಲ್ಲಿ ಇತ್ತೀಚೆಗೆ ಮುಖಂಡ ಮಹ್ಮದ್ ಯೂನೂಸ್ ಶಹಾಪೂರಿ ಅವರು ಆಯೋಜಿಸಿದ್ದ ಸನ್ಮಾನ ಸಮಾ ರಂಭದಲ್ಲಿ ಮಾತನಾಡಿ, ಪಟ್ಟಣದ ಅಭಿವೃದ್ಧಿಗಾಗಿ ಶಾಸಕ ಕೆ.ಶಿವನಗೌಡ ನಾಯಕ ಅವರು ಸಾಕಷ್ಟು ಅನುದಾನ ನೀಡಿದ್ದಾರೆ. ಇದನ್ನು ಮೆಚ್ಚಿ ಮತದಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದಾರೆಂದು ಹೇಳಿದರು.
ಈ ವೇಳೆ ಪುರಸಭೆಗೆ ನೂತನವಾಗಿ ಆಯ್ಕೆಯಾದ ಚಂದ್ರಶೇಖರ ಚಲುವಾದಿ, ರಂಗಯ್ಯ ಮರೆಯಪ್ಪ, ವೆಂಕಟೇಶ ಸೋಮಕಾರ, ಹನಮೇಶ ನಾಯಕ, ಫಕ್ರೂದ್ದೀನ್, ರಾಮಕಣಷ್ಣ ಎಂ., ಶ್ರೀನಿವಾಸ ಅಬಕಾರಿ, ಮಹ್ಮದ ಯೂನೂಸ್ ಶಹಾಪೂರಿ, ಸಿದ್ದಯ್ಯ ಸ್ವಾಮಿ, ನಾಗಪ್ಪ ನಾಡದಾಳ, ನಾಗಪ್ಪ ಉಪ್ಪಾರ ಸೇರಿ ಅನೇಕರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

