ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ತಾಯಿಯ ಪಾತ್ರ ಮುಖ್ಯ: ಹಂದ್ರಾಳ
ಮುದಗಲ್: ತಾಯಿಯೇ ಮೊದಲ ಗುರು, ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎನ್ನುವ ವಾಣಿಯಂತೆ ಮಕ್ಕಳ ವ್ಯಕ್ತಿತ್ವ, ಬುದ್ಧಿವಂತಿಕೆಯ ನಿರ್ಮಾಣದಲ್ಲಿ ತಾಯಿಯ ಪಾತ್ರ ಪ್ರಾಮುಖ್ಯವಾಗಿದೆ ಎಂದು ಶಿಕ್ಷಕ ಬಸವರಾಜ ಹಂದ್ರಾಳ ಹೇಳಿದರು.
ಸ್ಥಳೀಯ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಬೆಳ್ಳಿಹಬ್ಬ ಹಾಗೂ ವಿಜಯ ಮಹಾಂತೇಶ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದ ವಿಶೇಷ ಉಪನ್ಯಾಸಕರಾಗಿ ಅವರು ಮಾತನಾಡಿದರು.
ಶಿಕ್ಷಣದಿಂದ ವಂಚಿತರಾದವರು ಇಂದು ಶೋಷಣೆಗೆ ಒಳಗಾಗುತ್ತಾರೆ. ಇಂದು ಶಿಕ್ಷಣವೇ ದಿವ್ಯಾಸ್ತ್ರವಾಗಿದೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಪಾಲಕರು, ಸಮಾಜದ ಜವಾಬ್ದಾರಿಯಾಗಿದೆ. ಮನೆಯ ಆರ್ಥಿಕ ಪರಿಸ್ಥಿತಿಯನ್ನು ಬದಲಾವಣೆ ಮಾಡುವುದು ಮಕ್ಕಳ ಶಿಕ್ಷಣ ಎನ್ನುವದು ಪಾಲಕರು ಮರೆಯಬಾರದು. ಮಕ್ಕಳಲ್ಲಿ ಛಲವೊಂದಿದ್ದು, ವಿದ್ಯಾರ್ಥಿ ಜೀವನದಲ್ಲಿ ಪರಿಶ್ರಮ ಪಟ್ಟರೇ ಸಾಧನೆಗೆ ಮೂಲ ಕಾರಣವಾಗಲಿದೆ. ಮಕ್ಕಳ ಅಭಿವೃದ್ಧಿ, ವ್ಯಕ್ತಿತ್ವ ರೂಪಿಸುವಲ್ಲಿ ತಾಯಿಯ ಪ್ರೇರಣೆ ಮುಖ್ಯವಾಗಲಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಅಮರೇಗೌಡ ಪಾಟೀಲ ಮಟ್ಟೂರ ವಹಿಸಿದ್ದರು. ಆಡಳಿತಾಧಿಕಾರಿ ವೀರನಗೌಡ ಲೆಕ್ಕಿಹಾಳ ವಾರ್ಷಿಕ ವರದಿಯನ್ನು ಓದಿದರೆ, ಪ್ರಾಥಮಿಕ ಶಾಲೆ ಮುಖ್ಯಗುರು ನಾರಾಯಣರಾವ್ ಕುಲಕರ್ಣಿ ಶಾಲೆಯ ವರದಿಯನ್ನು ಮಂಡಿಸಿದರು.
ವೇದಿಕೆ ಮೇಲೆ ಬಿಆರ್ಸಿ ನಾಗನಗೌಡ ಬಯ್ಯಾಪುರ, ಶಿಕ್ಷಣ ಸಂಯೋಜಕ ಮಹಾಮುನಿಯಪ್ಪ, ಸಿಆರ್ಪಿ ರವೀಂದ್ರ, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪದಾಧಿಕಾರಿಗಳು, ಮುಖ್ಯಾಧಿಕಾರಿ ವಿಜಯಲಕ್ಷ್ಮೀ ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮ ನಿರೂಪಣೆಯನ್ನು ಶರಣಬಸವ ಗುಡಿ, ಸ್ವಾಗತವನ್ನು ಶಿಕ್ಷಕ ಮಹಾಂತೇಶ ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

