ಇಂದು ದತ್ತಿ ಉಪನ್ಯಾಸ
ಸಿಂಧನೂರು: ನಗರದ ಆದಿತ್ಯ ಪದವಿ ಕಾಲೇಜಲ್ಲಿ ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಮಾ.18ರಂದು ಬೆ.9ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ರಮಾದೇವಿ ಶಂಭೋಜಿ ತಿಳಿಸಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆದಿತ್ಯ ಪದವಿ ಕಾಲೇಜು ಪ್ರಾಚಾರ್ಯ ಕೆ.ಚಕ್ರವರ್ತಿ ವಹಿಸುವರು. ದಿ. ಎಂ.ಎಸ್. ಗೌಡ ಸ್ಮಾರಕ ದತ್ತಿಯ ಉಪನ್ಯಾಸವನ್ನು ನೈತಿಕ ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳು ವಿಷಯ ಕುರಿತು ಬಸವಯೋಗ ಸಮಿತಿ ಅಧ್ಯಕ್ಷ ಶಿವಣ್ಣ ಸಣ್ಣಪ್ಪನವರ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಗೌರವಾಧ್ಯಕ್ಷ ಎಸ್.ಶರಣೇಗೌಡ, ಗೌರವ ಕಾರ್ಯದರ್ಶಿ ಎಸ್.ದೇವೇಂದ್ರಗೌಡ, ದತ್ತಿ ದಾನಿಗಳಾದ ಎಂ.ಎಸ್. ನಾರಾಯಣಸ್ವಾಮಿ, ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಎಂ.ಭಾಸ್ಕರ್, ಸಂಗೀತ ಯುವತಿ ಮಂಡಳಿ ಉಪಾಧ್ಯಕ್ಷೆ ಗಂಗೂಬಾಯಿ, ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ಭಾಗವಹಿಸುವರು. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಸಾಪ ತಾಲೂಕು ಗೌರವ ಕಾರ್ಯದರ್ಶಿ ಶ್ರೀಶೈಲ್ ಕೌದಿ ಮತ್ತು ವೀರೇಶ ಗೋನವಾರ ಮನವಿ ಮಾಡಿದ್ದಾರೆ.
ವಿಜ್ಞಾನ ಮೇಳ
ರಾಯಚೂರು: ಮಾನವಿ ತಾಲೂಕಿನ ಸಿರವಾರ ಗ್ರಾಮದಲ್ಲಿ ಇತ್ತೀಚೆಗೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನದ ಆಶ್ರಯದಲ್ಲಿ ವಿಜ್ಞಾನ ಮೇಳವನ್ನು ಆಯೋಜಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

