ಸುಕಾಲಪೇಟೆ ಶಾಲೆ ತಾಲೂಕಿಗೆ ಮಾದರಿ
ಕನ್ನಡಪ್ರಭ ವಾರ್ತೆ, ಸಿಂಧನೂರು, ಮಾ.17
ಸರ್ಕಾರಿ ಶಾಲೆಗಳೆಂದರೆ ಬೇಜವಾಬ್ದಾರಿ ತೋರಿ ಮಕ್ಕಳಿಗೆ ಪಾಠಗಳನ್ನು ಹೇಳದೆ ಕಾಲಹರಣ ಮಾಡುತ್ತಾರೆ ಎನ್ನುವ ಮಾತನ್ನು ಸುಳ್ಳಾಗಿಸಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ಹಾಗೂ ಸಮಾಜದಲ್ಲಿ ಯಾವ ರೀತಿ ಜೀವನವನ್ನು ರೂಪಿಸಿಕೊಳ್ಳಬೇಕು ಎಂಬುದನ್ನು ಕಲಿಸುವಲ್ಲಿ ಸುಕಾಲಪೇಟೆ ಹಿರಿಯ ಪ್ರಾಥಮಿಕ ಶಾಲೆ ಮಾದರಿಯಾಗಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ಬಿ.ಹನುಮೇಶ ಅಭಿಪ್ರಾಯಪಟ್ಟರು.
ನಗರದ ಸುಕಾಲಪೇಟೆಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸರಸ್ವತಿ ಪೂಜಾ ಕಾರ್ಯಕ್ರಮ ಹಾಗೂ 8ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಬಾಳು ಬಂಗಾರವಾಗಬೇಕಾದರೆ ಶಿಕ್ಷಣದಿಂದಲೇ ಸಾಧ್ಯ. ಪ್ರಾಥಮಿಕ ಮಟ್ಟದಲ್ಲಿಯೇ ಮಕ್ಕಳಿಗೆ ಶಿಸ್ತು, ಸ್ವಚ್ಛತೆ ಹಾಗೂ ನಯ- ವಿನಯವನ್ನು ಕಲಿಸಿದರೆ ಸಮಾಜದಲ್ಲಿ ಹಿರಿಯ- ಕಿರಿಯರನ್ನು ಗೌರವಿಸುತ್ತಾನೆ. ಇದಲ್ಲದೆ ಶಾಲೆಯಲ್ಲಿ ಉನ್ನತ ಮಟ್ಟದಲ್ಲಿ ಮಕ್ಕಳಿಗೆ ಶಿಕ್ಷಣ ನೀಡಿದರೆ ಮುಂದೊಂದು ದಿನ ಉತ್ತಮ ಪ್ರಜೆಯಾಗಿ ಕಲಿತ ಶಾಲೆಗೆ, ಪಾಲಕರಿಗೆ ಕೀರ್ತಿ ತರುತ್ತಾನೆಂದು ಹೇಳಿದರು.
ಶಿಕ್ಷಣ ವಂಚಿತ ಮಕ್ಕಳಿಗೆ ಶಿಕ್ಷಣ ಕೊಡಿ: ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣ ಅವಶ್ಯ. ದೇಶದಲ್ಲಿನ ಅನಕ್ಷರತೆ ತೊಲಗಿಸಿ ಸಾಕ್ಷರರನ್ನಾಗಿ ಮಾಡಲು ಇಂದಿನ ಶಿಕ್ಷಣ ಸಂಸ್ಥೆಗಳು ಹೆಚ್ಚು ಶ್ರಮ ವಹಿಸುತ್ತಿವೆ. ಬಡವ, ಕೂಲಿಕಾರರ ಮಕ್ಕಳು ಶಿಕ್ಷಣವನ್ನು ಪಡೆಯದೆ ವಂಚಿತರಾಗಿ ಕೂಲಿ ಕೆಲಸಗಳಿಗೆ ಹೋಗುತ್ತಿದ್ದಾರೆ. ಇದೆಲ್ಲವನ್ನು ಶಿಕ್ಷಣ ಇಲಾಖೆಯವರು ಪರಿಶೀಲಿಸಿ ಶಿಕ್ಷಣ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸುವಲ್ಲಿ ಪಾತ್ರ ವಹಿಸಬೇಕು ಎಂದು ಸಲಹೆ ನೀಡಿದರು.
ಡಯಟ್ ಉಪನ್ಯಾಸಕ ಮಾರುತಿ ಗಾಳಿ ಮಾತನಾಡಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರವು ಬಿಸಿಯೂಟ, ಬಟ್ಟೆ, ಪಠ್ಯಪುಸ್ತಕ ಹಾಗೂ ವಿದ್ಯಾರ್ಥಿ ವೇತನಗಳನ್ನು ನೀಡಿ ಪ್ರೋತ್ಸಾಹಿಸಿ ವಿದ್ಯಾರ್ಥಿಗಳ ಗಮನವನ್ನು ಶಾಲೆಗಳ ಕಡೆ ಸೆಳೆಯುತ್ತಿದೆ ಎಂದರು.
ಎಸ್ಡಿಎಂಸಿ ಸದಸ್ಯ ಜಂಬಣ್ಣ ನಂಜಲದಿನ್ನಿ, ಶಿಕ್ಷಣ ಸಂಯೋಜಕ ಬಾಲಪ್ಪ ದಾಸರ್, ಕ.ರಾ.ಪ್ರಾ.ಶಾ.ಶಿ. ಸಂಘದ ಅಧ್ಯಕ್ಷ ಪಿ.ಎಸ್. ವಿರುಪಾಕ್ಷಬಾಬು, ಮುಖ್ಯೋಪಾಧ್ಯಾಯರ ಸಂಘ ಅಧ್ಯಕ್ಷ ಎಂ.ಬಿ. ದೊಡ್ಮನಿ, ಮುಖ್ಯ ಗುರು ಅನಂತರಾವ್, ಕ.ರಾ.ಪ್ರಾ. ಶಾಲಾ ಶಿಕ್ಷಕರ ಸಂಘ ಉಪಾಧ್ಯಕ್ಷ ಕೆ. ಮಲ್ಲಪ್ಪ ಸೇರಿದಂತೆ ಶಾಲಾ ಸಿಬ್ಬಂದಿ ಇದ್ದರು.
ಸನ್ಮಾನ: ನಗರಸಭೆಯ ನೂತನ ಸದಸ್ಯ ನಾಗಪ್ಪ ಗಿರಿಜಾಲಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮಲ್ಲಪ್ಪ ಬಾದರ್ಲಿ, ಕನಕನಗರ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ವೀರೇಶ ಗೋನವಾರ, ಅನುದಾನಿತ ತಾಲೂಕು ಪ್ರಾ.ಶಾ.ಶಿ.ಸಂ. ಅಧ್ಯಕ್ಷ ವಿಠಲ್, ಡಾನ್ಸ್ ಮಾಸ್ಟರ್ ಶ್ರೀಧರ ಅವರನ್ನು ಶಾಲೆ ವತಿಯಿಂದ ಸನ್ಮಾನಿಸಲಾಯಿತು. ಶಿಕ್ಷಕರಾದ ಮಂಜುಳಾ ಸ್ವಾಗತಿಸಿದರು. ಬಸವರಾಜ ಅಂಗಡಿ ನಿರೂಪಿಸಿದರು. ಅಂಭೋಜಿ ಪವಾರ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

