ರಾಯಚೂರು

ಮಂತ್ರಾಲಯ: ಇಂದು ಶ್ರೀರಾಯರ ವರ್ಧಂತಿ ಉತ್ಸವ

Published On :

ರಾಯಚೂರು: ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಗುರುಭಕ್ತಿ ಉತ್ಸವದ ಕಡೆಯ ದಿನ ಮಾ.19ರಂದು ಶ್ರೀರಾಘವೇಂದ್ರಸ್ವಾಮಿಗಳ ವರ್ಧಂತಿ ಉತ್ಸವ ನಡೆಯಲಿದೆ.ವರ್ಧಂತಿ ಅಂಗವಾಗಿ ಶ್ರೀರಾಯರ ಮೂಲಬೃಂದಾವನಕ್ಕೆ ವಿಶೇಷ ಪೂಜೆ ಅಭಿಷೇಕ ನೆರವೇರಿಸಿ ನವರತ್ನ ರಥವನ್ನು ಶ್ರೀರಾಯರಿಗೆ ಸಮರ್ಪಣೆ ಮಾಡುವ ಸಮಾರಂಭವನ್ನೂ ಆಯೋಜಿಸಲಾಗಿದೆ. ಈ ವೇಳೆ ಚೆನ್ನೈನ ಹನುಮಂತಪುರಂ ಪಲ್ಲಕ್ಕಿ ಸೇವಾ ಟ್ರಸ್ಟ್ ವತಿಯಿಂದ ನಾದಹಾರಂ ಸಾಮೂಹಿಕ ಕೀರ್ತನೆ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಗ್ರಾಮ ಪಂಚಾಯ್ತಿ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಯಚೂರು:
ಮಾನವಿ ತಾಲೂಕಿನ ಕುರ್ಡಿ ಗ್ರಾಪಂ ಅಧ್ಯಕ್ಷರು ಪ್ರಮಾಣ ಪತ್ರಗಳ ನೀಡಿಕೆಗೆ ಹಣ ಪಡೆಯುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ಈ ಕುರಿತು ಇತ್ತೀಚೆಗೆ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿರುವ ಸಂಘಟನೆಯ ತಾಲೂಕು ಸಂಘಟನಾ ಸಂಚಾಲಕ ಭಾಸ್ಕರ್ ಮ್ಯಾತ್ರಿ ಕುರ್ಡಿ, ಗ್ರಾಪಂ ಅಧ್ಯಕ್ಷೆ ಆನಂದಮ್ಮ ಅವರು ಅನಕ್ಷರಸ್ಥರಾಗಿದ್ದು, ಅವರ ಪರವಾಗಿ ಅವರ ಪುತ್ರ ನಾನಾ ರೀತಿಯ ಅಕ್ರಮಗಳನ್ನು ನಡೆಸುತ್ತಿದ್ದು, ಇದರಿಂದ ಗ್ರಾಪಂ ಆಡಳಿತದಲ್ಲಿಯೂ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಆರೋಪಿಸಿದರು. ಈ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷರ ಸದಸ್ಯತ್ವ ರದ್ದುಗೊಳಿಸುವಂತೆ ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.