ತುಂಗಭದ್ರಾ ಎಡದಂಡೆ ಕಾಲುವೆ: ನಿಷೇಧಾಜ್ಞೆ ಜಾರಿ
ರಾಯಚೂರು: ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಿರುವುದರಿಂದ ಎಡದಂಡೆ ಕಾಲುವೆಯ ಮೈಲ್ 47ರಿಂದ 100ನೇ ಮೈಲ್ವರೆಗೆ ಕಾಲುವೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಂಗ್ರಹಣೆ ಹಿನ್ನೆಲೆ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ಜಿಲ್ಲಾಧಿಕಾರಿ ನಾಗರಾಜು ಅವರು ಈ ಕುರಿತು ಆದೇಶ ಹೊರಡಿಸಿದ್ದು, ಮೈಲ್ 47ರಿಂದ 100ರ ವ್ಯಾಪ್ತಿಯ ಸಿಂಧನೂರು, ಮತ್ತು ಮಾನವಿ ತಾಲೂಕುಗಳಲ್ಲಿ ಕಾಲುವೆಯ ಎಡ ಮತ್ತು ಬಲ ಭಾಗದಲ್ಲಿನ ಜಮೀನುಗಳ ರೈತರು ವಿತರಣಾ ಕಾಲುವೆಗಳಿಗೆ ಹಾನಿ ಉಂಟು ಮಾಡುವ ಸಂಭವವಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.
ನಿಷೇಧಾಜ್ಞೆಯು ಮಾ.18ರ ಬೆಳಗ್ಗೆ 6ರಿಂದ ಮಾ.25ರ ಬೆಳಗಿನ 6 ರವರೆಗೆ ಜಾರಿಯಲ್ಲಿರುತ್ತದೆ. ಈ ವ್ಯಾಪ್ತಿ ಪ್ರದೇಶದಲ್ಲಿ ನೀರಾವರಿ ಇಲಾಖೆಯ ಅಧಿಕಾರಿಗಳು ಮಾತ್ರ ಕಾಲುವೆಯ ತೂಬುಗಳನ್ನು ತೆರೆಯುವ ಮತ್ತು ಮುಚ್ಚುವ ಕಾರ್ಯ ನಿರ್ಳಹಿಸಲಿದ್ದು, ಅನ್ಯರಿಗೆ ಈ ಕಾರ್ಯನಿರ್ವಹಿಸಲು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಿಸಿದ ನೀರಾವರಿ ಇಲಾಖೆಯ ಹಿರಿಯ, ಕಿರಿಯ ಅಧಿಕಾರಿಗಳು ತಮ್ಮ ಕಾರ್ಯವ್ಯಾಪ್ತಿ ಪ್ರದೇಶದಲ್ಲಿದ್ದು, ನೀರಿನ ನಿರ್ವಹಣೆ ಮೇಲೆ ನಿಗಾಯಿರಿಸಬೇಕು. ಡಿಸಿ ಲಿಖಿತ ಪೂರ್ವಾನುಮತಿ ಪಡೆಯದೇ ರಜಾ ದಿನಗಳೂ ಸೇರಿ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

