ರಾಯಚೂರು

ಸಮುದಾಯ ಭವನಕ್ಕೆ ಗುದ್ದಲಿ ಪೂಜೆ

Published On :

ಮುದಗಲ್: ಸ್ಥಳೀಯ ನೀರದೊಡ್ಡಿ ವಾರ್ಡ್ ನಂ.18 ರಲ್ಲಿ ಶಾಸಕರ ಅನುದಾನದಲ್ಲಿ ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗಾಗಿ ರು. 2.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನಕ್ಕೆ ಗುದ್ದಲಿ ಪೂಜೆಯನ್ನು ಪ.ಪಂ. ನೂತನ ಸದಸ್ಯ ಬಂದೇನವಾಜ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಎಪಿಎಂಸಿ ಉಪಾಧ್ಯಕ್ಷ ಎಸ್.ಆರ್. ರಸೂಲ್, ಸ್ತ್ರೀಶಕ್ತಿ ಗುಂಪಿನ  ಮಹಿಳಾ ಮುಖ್ಯಸ್ಥೆ ರಜಿಯಾ ಬೇಗಂ, ಖಾಜಾಬಿ, ಸುರೇಖ, ದುರುಗವ್ವ, ರಾಜಮ್ಮ, ಹುಸೇನಸಾಬಬ್ಮುಂತಾದವರು ಉಪಸ್ಥಿತರಿದ್ದರು.

ಇಂದು, 21ರಂದು ವಿದ್ಯುತ್ ವ್ಯತ್ಯಯ
ರಾಯಚೂರು:
ತಾಲೂಕಿನ ಯರಗೇರಾ ಶಾಖೆಯ ವ್ಯಾಪ್ತಿಯ ತುಂಟಾಪೂರ ಗ್ರಾಮ  ಸುತ್ತಲಿನ ಪ್ರದೇಶದಲ್ಲಿ ಮಾ.19 ಹಾಗೂ 21ರಂದು ವಿದ್ಯುತ್ ಪೂರೈಕೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಯರಗೇರಾ   ಪಿಜಿ ಸೆಂಟರ್ ಹಾಗೂ ಕೈಗಾರಿಕೆ ಪ್ರದೇಶಗಳಿಗೆ ಮಾ.19 ಮತ್ತು 21ರಂದು ಬೆಳಗಿನ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿರುವುದಿಲ್ಲ ಎಂದು ಜೆಸ್ಕಾಂ ತಿಳಿಸಿದೆ.
ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು
ರಾಯಚೂರು: ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದ ಬಳಿ ವ್ಯಕ್ತಿಯೊಬ್ಬ ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ. ಮೃತನನ್ನು ವಿರುಪಣ್ಣ ಎಂದು ಗುರುತಿಸಲಾಗಿದೆ. ಈತ ತನ್ನ ಜಾನುವಾರುಗಳಿಗೆ ಕೆರೆಯಲ್ಲಿ ನೀರು ಕುಡಿಸಲು ಕರೆದೊಯ್ದಾಗ ಆಯತಪ್ಪಿ ಕೆರೆಯ ನೀರಿಗೆ ಬಿದ್ದಿದ್ದಾನೆ. ನೀರಿನಿಂದ ಮೇಲೆ ಬರಲಾಗದೇ ಸಾವಿಗೀಡಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.