ಸಿಂಧನೂರು; ಆಧಾರ್‌ಗಾಗಿ ರಾತ್ರಿಯಿಡೀ ಜಾಗರಣೆ
ಕ.ಪ್ರ. ವಾರ್ತೆ, ಸಿಂಧನೂರು, ಮಾ.20
ಆಧಾರ್ ಪಡೆಯಲು ಜನರು ರಾತ್ರಿಯಿಡೀ ಜಾಗರಣೆ ಮಾಡುತ್ತಿದ್ದಾರೆ. ಇಂದಿರಾನಗರ, ಗಂಗಾನಗರ, ಖದರಿಯಾ ಕಾಲೋನಿ, ಬಂಗಾಲಿ ಕ್ಯಾಂಪ್, 3ನೇ ಮೈಲ್ ಕ್ಯಾಂಪ್ ಸೇರಿದಂತೆ ಇನ್ನಿತರ ವಾರ್ಡ್‌ಗಳ ನೂರಾರು ಜನ ಎಪಿಎಂಸಿಯ ಆಧಾರ್ ವಿತರಣಾ ಕೇಂದ್ರದ ಮುಂಭಾಗದಲ್ಲಿ 3 ದಿನಗಳಿಂದ ರಾತ್ರಿ ಅಲ್ಲಿಯೇ ಮಲಗುತ್ತಿದ್ದಾರೆ.
ಆಧಾರ್ ಕಾರ್ಡ್ ಪಡೆಯಲು ಕುಟುಂಬದ ಸದಸ್ಯರೆಲ್ಲರೂ ಕೇಂದ್ರಕ್ಕೆ ಬಂದು ಸರದಿಸಾಲಿನಲ್ಲಿ ನಿಲ್ಲಬೇಕು. ಇದರಿಂದ ವಯೋವೃದ್ಧರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಸಾಯಂಕಾಲದವರೆಗೆ ನಿಂತರೂ ಕಾರ್ಡ್ ದೊರೆಯದೇ ರಾತ್ರಿ ಅಲ್ಲಿಯೇ ವಾಸ್ತವ್ಯ ಹೂಡುತ್ತಿದ್ದಾರೆ.
ನೂಕುನುಗ್ಗಲು: ಆಧಾರ್ ಕಾರ್ಡ್ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸರದಿಯಲ್ಲಿ ನೂಕುನುಗ್ಗಲು ಸಾಮಾನ್ಯವಾಗಿದೆ. ಇದರಿಂದಾಗಿ ಸಣ್ಣಪುಟ್ಟ ಜಗಳಗಳಾಗುತ್ತಿವೆ. ಬಂದೋಬಸ್ತ್‌ಗೆ ಪೊಲೀಸ್ ಸಿಬ್ಬಂದಿ ಇಲ್ಲದ ಕಾರಣ ಕೆಲವರು ಪ್ರಭಾವ ಬಳಸಿಕೊಂಡು ಕಾರ್ಡ್ ಪಡೆಯುತ್ತಿದ್ದಾರೆ ಎಂದು ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದರು. ಎಲ್ಲ ವಾರ್ಡ್‌ಗಳಲ್ಲಿ ಆಧಾರ್ ವಿತರಣಾ ಕೇಂದ್ರ ಸ್ಥಾಪಿಸುವ ಮೂಲಕ ಜನತೆಗೆ ಅನುಕೂಲ ಕಲ್ಪಿಸಬೇಕು. ಒಂದೇ ಕೇಂದ್ರದಿಂದ ವಿತರಣೆ ಮಾಡುವುದು ಅಸಾಧ್ಯದ ಮಾತು ಎಂದು ಅಂಗವಿಕಲರ ಸಂಘದ ಜಿಲ್ಲಾಧ್ಯಕ್ಷ ಹುಸೇನಸಾಬ ಪರಾಪುರ, ಮಂಜುನಾಥಗೌಡ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

