ರಾಯಚೂರು

ಡಾ. ಪ್ರಭುವೀರಗೆ ವೈದ್ಯಕೀಯ ವಿಭಾಗದ ಶ್ರೇಷ್ಠ ಲೇಖಕ ಪ್ರಶಸ್ತಿ

Published On :

ಸಿಂಧನೂರು: ಸ್ಥಳೀಯ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಪ್ರಭುವೀರ ಕ್ಯಾಲಕೊಂಡ ಅವರು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ನೀಡಲಾಗುವ ವೈದ್ಯಕೀಯ ವಿಭಾಗದ ಶ್ರೇಷ್ಠ ಲೇಖಕ  ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅಕಾಡೆಮಿಯಿಂದ ನೀಡಲಾಗುವ ಪುರಸ್ಕಾರಕ್ಕಾಗಿ ಬರೆದ 'ಜೀವನ ಜೋಪಾನ' ಮತ್ತು 'ಲಸಿಕಾ ಲೋಕ' ಪುಸ್ತಕಗಳಿಗೆ ಈ ಪ್ರಶಸ್ತಿ ನೀಡಲಾಗಿದೆ ಎಂದು ಅಕಾಡೆಮಿಯ ಕಾರ್ಯದರ್ಶಿ ಡಾ. ಎಚ್.ಹೊನ್ನೇಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಜರುಗಿದ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
30ರಂದು ನಗರಕ್ಕೆ ಡಾ. ಕಲಾಂ
ರಾಯಚೂರು: ಇಲ್ಲಿನ ಕೃಷಿ ವಿವಿ ಘಟಿಕೋತ್ಸವ ಮಾ.30ರಂದು ನಡೆಯಲಿದ್ದು, ಘಟಿಕೋತ್ಸವದಲ್ಲಿ ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಮುಖ್ಯ ಆಕರ್ಷಣೆಯಾಗಿ ಪಾಲ್ಗೊಳ್ಳಲಿದ್ದಾರೆ. ನಗರಕ್ಕೆ ಮಾ. 29ರಂದು ರಾತ್ರಿ ಆಗಮಿಸಲಿರುವ ಅವರು, ಮಾ. 30ರಂದು ಬೆ.10ಕ್ಕೆ ನಡೆಯುವ ಕೃಷಿ ವಿವಿಯ ಘಟಿಕೋತ್ಸವದಲ್ಲಿ ಮುಖ್ಯ ಭಾಷಣ ಮಾಡಲಿದ್ದಾರೆ. ಘಟಿಕೋತ್ಸವ ಸಮಾರಂಭದ ನಂತರ ಜಿಲ್ಲೆಯ ವಿವಿಧೆಡೆಯ ವಿಜ್ಞಾನ ವಿಷಯದ ಸುಮಾರು 400 ವಿದ್ಯಾರ್ಥಿಗಳೊಂದಿಗೆ ಮಾಜಿ ರಾಷ್ಟ್ರಪತಿ ಕಲಾಂ ಅವರು ಸಂವಾದ ನಡೆಸಲಿದ್ದಾರೆ. ಘಟಿಕೋತ್ಸವ ಹಿನ್ನೆಲೆಯಲ್ಲಿ ಹಾಗೂ ಮಾಜಿ ರಾಷ್ಟ್ರಪತಿ ಕಲಾಂ ಅವರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ಸಂವಾದದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಕೃಷಿ ವಿವಿ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.