ವರ್ಗಾವಣೆ ತಡೆಗೆ ಡಿವೈಎಫ್ಐ ಆಗ್ರಹ
ಲಿಂಗಸ್ಗೂರು: ಸ್ಥಳೀಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರ ವರ್ಗಾವಣೆ ತಡೆಹಿಡಿಯುವಂತೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್(ಡಿವೈಎಫ್ಐ) ತಾಲೂಕು ಮುಖಂಡರಾದ ಸಿದ್ಧು ಗವಿ, ಶರೀಫ್ಸಾಬ, ಬಾಬು ಕಡ್ಡೋಣಿ, ಮಹ್ಮದ್ ಹನೀಫ್ ಸಹಾಯಕ ಆಯುಕ್ತರಿಗೆ ಆಗ್ರಹಿಸಿದ್ದಾರೆ.
ಸರ್ಕಾರಿ ಡಿಪ್ಲೋಮಾ ಪಾಲಿಟೆಕ್ನಿಕ್ ಕಾಲೇಜಿಗೆ ಕಳೆದ ಸುಮಾರು ನಾಲ್ಕು ತಿಂಗಳ ಹಿಂದೆ ನೇಮಕಗೊಂಡ ಉಪನ್ಯಾಸಕರಾದ ಬಣಕಾರ ಸಿದ್ದೇಶ ಮತ್ತು ಮಹ್ಮದ್ ಅಬಿದುಲ್ಲಾ ಅವರು ಹಣಕೊಟ್ಟು ವರ್ಗಾವಣೆ ಆದೇಶ ತರಿಸಿಕೊಂಡಿದ್ದಾರೆ. ಇದರಲ್ಲಿ ಮೇಲಾಧಿಕಾರಿಗಳು ಶಾಮೀಲಾಗಿದ್ದು, ಮೂರು ವರ್ಷ ಕಡ್ಡಾಯವಾಗಿ ಒಂದೇ ಕಾಲೇಜಿನಲ್ಲಿ ಸೇವೆ ಸಲ್ಲಿಸತಕ್ಕದ್ದು ಎಂದು ಸರ್ಕಾರಿ ಆದೇಶವಿರುತ್ತದೆ. ವರ್ಗಾವಣೆಯಿಂದ ವಿದ್ಯಾರ್ಥಿಗಳ ಭವಿಷ್ಯ ಬೀದಿಪಾಲಾಗುವ ಸಾಧ್ಯತೆಯಿದ್ದು, ಇನ್ನು ಒಂದು ತಿಂಗಳು ಪರೀಕ್ಷೆ ಇರುವ ಮುನ್ನವೇ ಸದರಿ ಉಪನ್ಯಾಸಕರನ್ನು ಕಾಲೇಜು ಪ್ರಾಚಾರ್ಯರು ಬೇರೆಡೆ ನಿಯೋಜನೆ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದರೂ ಸದರಿ ಉಪನ್ಯಾಸಕರಿಗೆ ಮಾ.20 ರಂದು ವರ್ಗಾವಣೆ ಆದೇಶ ನೀಡಿದ್ದಾರೆ. ಕಾನೂನು ಬಾಹಿರವಾಗಿ ಬೇರೆಡೆ ನಿಯೋಜನೆ ಮಾಡಿದ ಪ್ರಾಚಾರ್ಯರು ಮತ್ತು ಉಪನ್ಯಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಸಮಿತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

