ಅಂಗಡಿ ತೆರವಿಗೆ ನೋಟಿಸ್
ಕನ್ನಡಪ್ರಭ ವಾರ್ತೆ ಸಿಂಧನೂರು ಮಾ.22
ತಾಲೂಕಿನ ಬಳಗಾನೂರು ಗ್ರಾಮದ ಸಂತೆ ಮಾರುಕಟ್ಟೆ, ಬಸ್ ನಿಲ್ದಾಣ ಹಾಗೂ ಎಪಿಎಂಸಿ ಮಾರುಕಟ್ಟೆ ಜಾಗದಲ್ಲಿ ಖಾಸಗಿಯವರು ಅಂಗಡಿಗಳನ್ನು ನಡೆಸುತ್ತಿದ್ದು ಕೂಡಲೇ ತೆರವುಗೊಳಿಸುವಂತೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ನೋಟಿಸ್ ನೀಡಿದ್ದಾರೆ.
ತೇರಿನ ಮನೆ ಹತ್ತಿರ ಹಾಗೂ ವಾರದ ಸಂತೆ ನಡೆಯುವ ಜಾಗವನ್ನು ಆಕ್ರಮಿಸಿಕೊಂಡಿರುವ ಮಟನ್, ಚಿಕನ್ ಹಾಗೂ ಸಣ್ಣಪುಟ್ಟ ಅಂಗಡಿ ಮುಂಗಟ್ಟುಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ದೂರುಗಳು ಬಂದ ಹಿನ್ನೆಲೆಯಲ್ಲಿ ತೆರವಿಗೆ ನೋಟಿಸ್ ನೀಡಲಾಗಿದ್ದು, ವಾರದೊಳಗೆ ತೆರವುಗೊಳಿಸದಿದ್ದಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಿಡಿಒ ನಾಗೇಶ ನೋಟಿಸ್ನಲ್ಲಿ ತಿಳಿಸಿದ್ದಾರೆ.
ಗ್ರಾಪಂ ಪರವಾನಗಿ ಕಡ್ಡಾಯ: ಗ್ರಾಮದ ಇನ್ನುಳಿದ ಎಲ್ಲ ಹೋಟೆಲ್, ಖಾನಾವಳಿ, ಕಿರಾಣಿ, ಡಾಬಾ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಣ್ಣಪುಟ್ಟ ಅಂಗಡಿಗಳ ಮಾಲೀಕರು ಗ್ರಾಪಂ.ನಿಂದ ಕಡ್ಡಾಯವಾಗಿ ಪರವಾನಗಿ ಪಡೆದುಕೊಳ್ಳಬೇಕು. ಇಲ್ಲದಿದ್ದರೆ ಅಂತಹ ಅಂಗಡಿಗಳ ಬಗ್ಗೆ ಆಡಳಿತ ಮಂಡಳಿಯ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಮುಂದಾಗುವ ಕುರಿತು ಎಚ್ಚರಿಕೆ ನೀಡಿದ್ದಾರೆ.
ಪ್ರಕರಣ ದಾಖಲು: ತೇರಿನ ಮನೆ ಮುಂದೆ ತತ್ತಿ ಮತ್ತು ಮಾಂಸ ಮಾರಾಟ ಮಾಡುವ ಹಿನ್ನೆಲೆಯಲ್ಲಿ ವ್ಯಾಪಾರಸ್ಥರ ಮತ್ತು ಸಾರ್ವಜನಿಕರ ನಡುವೆ ವಾದ ನಡೆದ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು, ವ್ಯಾಪಾರಿಗಳು ಮತ್ತು ಸಾರ್ವಜನಿಕರ ನಡುವೆ ಶಾಂತಿ ಸಭೆ ನಡೆಸಿ ಪರಿಸ್ಥಿತಿ ತಿಳಿಸಿಗೊಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಶಾಂತಿಗೆ ಭಂಗವಾಗಬಾರದೆನ್ನುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಲಂ 107 ಸಿಆರ್ಪಿಸಿ ಅಡಿಯಲ್ಲಿ ಪೊಲೀಸರು ಮಲ್ಲರಡ್ಡಿ ಮರಡ್ಡಿ, ಶೇಖರಗೌಡ ಮಾಲಿ ಪಾಟೀಲ್ ಹಾಗೂ ಹುಸೇನಬಾಷಾ ಬೂದಗುಂಪಾ, ಮಹ್ಮದ್ ರಫೀ ಕರ್ನೂಲ್, ರಾಜಾಸಾಬ ಹಣಗಿ, ರಜ್ಜಬಲಿ ಹಾದಿಮನಿ ಅವರು ಸೇರಿದಂತೆ 57 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತಾಲೂಕು ದಂಡಾಧಿಕಾರಿಗಳಿಗೆ ಮುಂದಿನ ಕ್ರಮ ಜರುಗಿಸಲು ಶಿಫಾರಸ್ಸು ಮಾಡಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

