ದರೋಡೆಗೆ ಯತ್ನ; 6 ಜನರ ಬಂಧನ
ಗುಲ್ಬರ್ಗ: ಇಲ್ಲಿನ ಹುಮನಾಬಾದ್ ಮುಖ್ಯ ರಸ್ತೆಯ ತಾವರಗೇರಾ ಬಸ್ ನಿಲ್ದಾಣದ ಬಳಿ ಮಾರಕಾಸ್ತ್ರಗಳಿಂದ ವಾಹನ ತಡೆದು ದರೋಡೆಗೆ ಯತ್ನಿಸಿದ 6 ಜನ ದರೋಡೆಕೋರರನ್ನು ಬಂಧಿಸುವಲ್ಲಿ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಾಗರಾಜ ಬೆಡಪಲ್ಲಿ, ಮಲ್ಲಿಕಾರ್ಜುನ ಅಲಿಯಾಸ್ ಮಲ್ಲು ಅಲ್ಲಾಪುರ, ರವಿ ಹಲಚೇರಿಕರ್, ಸುಭಾಷ ಜಮಾದಾರ, ವೆಂಕಟೇಶ ಅಲಿಯಾಸ್ ವೆಂಕಟ ಗೌಳಿ, ಅಶೋಕ ಎಂಬುವರನ್ನು ಬಂಧಿಸಿ, ನ್ಯಾಯಾಂಗ ವಶಕ್ಕೊಪ್ಪಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಆನಂದರಾವ ಹಾಗೂ ಸಿಬ್ಬಂದಿ ಎಸ್ಪಿ ಮಾರ್ಗದರ್ಶನದಲ್ಲಿ ಶನಿವಾರ ಬೆಳಗಿನ ಜಾವ 3ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 6 ಜನರನ್ನು ಬಂಧಿಸಿ ಅವರಿಂದ ಮಾರಕಾಸ್ತ್ರ, ಹಗ್ಗ, ಮಚ್ಚುಗಳು ಮತ್ತು ಒಂದು ಇಂಡಿಕಾ ಕಾರ್ ಜಪ್ತಿ ಮಾಡಿಕೊಂಡಿದ್ದಾರೆ.
ಸರಗಳ್ಳತನ
ಗುಲ್ಬರ್ಗ: ಸರಗಳ್ಳನೊಬ್ಬ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾದ ಘಟನೆ ನಗರದ ವರ್ಗಿಸ್ ಪ್ಲಾಟ್ ಬಳಿ ಶನಿವಾರ ರಾತ್ರಿ ನಡೆದಿದೆ. ಸಂತೋಷ ಕಾಲೋನಿಯ ನಿರ್ಮಲಾ ಗಂಡ ಈರಣ್ಣಗೌಡ ಪಾಟೀಲ್ ಎಂಬುವರು ಗೆಳತಿಯೊಂದಿಗೆ ನಗರದ ಪಿಐಟಿ ಕಾಲೋನಿಯಿಂದ ಮನೆಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನದ ಮೇಲೆ ಬಂದ ಸರಗಳ್ಳನೊಬ್ಬ ನಿರ್ಮಲಾ ಅವರ 3.5 ತೊಲೆ ಬಂಗಾರದ ಮಂಗಳಸೂತ್ರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏ.4ರಿಂದ ಶಿಬಿರ
ಗುಲ್ಬರ್ಗ: ನಗರದ ಜಿಲ್ಲಾ ವಿಜ್ಞಾನ ಕೇಂದ್ರವು ಮಕ್ಕಳಿಗೆ ಏ.4ರಿಂದ 18ರವರೆಗೆ ಪ್ರತಿದಿನ ಬೆಳಗ್ಗೆ 10.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೇಸಿಗೆ ವಿಜ್ಞಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಿಜ್ಞಾನ ಅಧಿಕಾರಿ ಸಿ.ಎನ್. ಲಕ್ಷ್ಮೀನಾರಾಯಣ ತಿಳಿಸಿದ್ದಾರೆ. ಈ ಶಿಬಿರದಲ್ಲಿ 7ನೇ ತರಗತಿಯಿಂದ 10ನೇ ತರಗತಿವರೆಗೆ ವಿದ್ಯಾರ್ಥಿಗಳು ಪ್ರವೇಶ ಪಡೆದು ಭಾಗವಹಿಸಬಹುದು. ಅರ್ಜಿಗಳನ್ನು ಮಾ.25ರಿಂದ ಏ.3ರವರೆಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಪಡೆಯಬಹುದು. ವಿವರಕ್ಕೆ ಜಿಲ್ಲಾ ವಿಜ್ಞಾನ ಕೇಂದ್ರ- 220608, ಮೊ. 94817 81486ಗೆ ಸಂಪರ್ಕಿಸಬಹುದು.
ಪತ್ತೆಗೆ ಮನವಿ
ಗುಲ್ಬರ್ಗ: ವಾಡಿ ರೇಲ್ವೆ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ವ್ಯಕ್ತಯೊಬ್ಬನ ಶವ ದೊರೆತಿದೆ. ಮೃತರ ವಾರಸುದಾರರು ಪತ್ತೆಯಾದಲ್ಲಿ ವಾಡಿ ರೇಲ್ವೆ ಪೊಲೀಸ್ ಠಾಣೆ ದೂ. 08476- 202244 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

