ರಾಯಚೂರು

ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

Published On :

ಸುರಪುರ: ಪಟ್ಟಣ ಸೇರಿದಂತೆ ರಂಗಂಪೇಟೆ- ತಿಮ್ಮಾಪುರ ಶಾಲೆಗಳಲ್ಲಿ ಭಾನುವಾರ 2013- 14ನೇ ಸಾಲಿನ ಮೊರಾರ್ಜಿ ದೇಸಾಯಿ, ರಾಣಿ ಕಿತ್ತೂರು ಚೆನ್ನಮ್ಮ, ವಾಜಪೇಯಿ ವಸತಿ ಶಾಲೆಗಳ ಆಯ್ಕೆಗಾಗಿ ಪರೀಕ್ಷೆಗಳು ಜರುಗಿದವು. ಒಟ್ಟು 1,724 ವಿದ್ಯಾರ್ಥಿಗಳ ಪೈಕಿ 107 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾದರೆ ಒಟ್ಟು 1,617 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಸುರಪುರದ ಪ್ರಭು ಕಾಲೇಜು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ರಂಗಂಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷೆಗಳು ನಡೆದವು. ಕೊಡೇಕಲ್, ಹುಣಸಗಿ, ಕೆಂಭಾವಿ, ಕಕ್ಕೇರಾ ವಲಯಗಳಿಂದ ವಿವಿಧ ಶಾಲೆಗಳು ಮಕ್ಕಳು ಪರೀಕ್ಷೆ ಬರೆದರು. ನೋಡಲ್ ಅಧಿಕಾರಿಯಾಗಿ ಪಂಡಿತ ನಿಂಬೂರ್ ಕಾರ್ಯನಿರ್ವಹಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ವಿ. ಕೆಂಪರಂಗಯ್ಯ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಧೇನುಸಿಂಗ ಚವ್ಹಾಣ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದರು.
ಜೀಪ್ ಡಿಕ್ಕಿ; ಬೈಕ್ ಸವಾರ ಸಾವು
ಕೆಂಭಾವಿ: ಜೀಪು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಮೀಪದ ಯಡಿಯಾಪುರ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಹೆಬ್ಬಾಳ ಗ್ರಾಮದ ಮಲ್ಲಪ್ಪ ಹೆಗ್ಗೇರಪ್ಪ(28) ಮೃತ ವ್ಯಕ್ತಿ. ಮಾಳಹಳ್ಳಿಯಿಂದ ಕೆಂಭಾವಿಗೆ ದ್ವಿಚಕ್ರ ವಾಹನದಲ್ಲಿ ಬರುತ್ತಿರುವಾಗ ಎದುರಿಗೆ ಬಂದ ಜೀಪ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಕೆಂಭಾವಿ ಪಿಎಸ್ಐ ಜಗದೇವಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೆಂಭಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲೋಕಾಯುಕ್ತ ಕೋರ್ಟ್ಗೆ ನೇಮಕ
ಯಾದಗಿರಿ: ಜಿಲ್ಲೆಯ ಲೋಕಾಯುಕ್ತ ನ್ಯಾಯಾಲಯದ ವಿಶೇಷ ಸಾರ್ವಜನಿಕ ಅಭಿಯೋಜಕರನ್ನಾಗಿ ವಕಾಲರಾದ ಪಿ.ಶಿವರಾಜ ಉಳ್ಳೆಸೂಗೂರ ಅವರು ನೇಮಕಗೊಂಡಿದ್ದಾರೆ. ಬೆಂಗಳೂರಿನ ರಾಜ್ಯ ಲೋಕಾಯುಕ್ತ ರಜಿಸ್ಟ್ರಾರ್ ಆಗಿರುವ ಬಿ.ಜೋಗಿನಾಥ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಶಿವರಾ ಅವರ ನೇಮಕಕ್ಕೆ ವಕೀಲರ ಸಂಘ ಹರ್ಷ ವ್ಯಕ್ತಪಡಿಸಿದೆ.
ಗ್ರಾಮೀಣ ನಾಟಕೋತ್ಸವ
ಯಾದಗಿರಿ: ದೃಶ್ಯ ಮಾಧ್ಯಮಗಳ ಹಾವಳಿಯಿಂದ ಇಂದು ನಾಟಕಗಳನ್ನು ನೋಡುವ ಗೀಳು ಜನರಲ್ಲಿ ಕಡಿಮೆಯಾಗುತ್ತಿದೆ. ಪರಿಣಾಮವಾಗಿ ನಾಟಕಗಳು ನಶಿಸುತ್ತಿವೆ ಎಂದು ಗುರುಮಠಕಲ್ ಖಾಸಾಮಠದ ಶಾಂತವೀರ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು. ಸುರಪುರ ತಾಲೂಕಿನ ಯಾಳಗಿ ಗ್ರಾಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಮೀಣ ನಾಟಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.