ಕೋಣ ಇರಿದು ವ್ಯಕ್ತಿ ಸಾವು
ರಾಯಚೂರು: ತಾಲೂಕಿನ ಯಾಪಲದಿನ್ನಿ ಗ್ರಾಮದ ಹೊಲವೊಂದರಲ್ಲಿ ಕೋಣ ಇರಿದು ವ್ಯಕ್ತಿ ಮೃತಪಟ್ಟಿದ್ದಾನೆ. ಮೃತನನ್ನು ದುರ್ಗಪ್ಪ(50) ಎಂದು ಗುರುತಿಸಲಾಗಿದೆ. ಈತ ಗ್ರಾಮದ ಹೊಲದಲ್ಲಿ ಕೆಲಸ ಮಾಡುವಾಗ ದೇವರಿಗೆ ಬಿಟ್ಟ ಕೋಣವು ಹೊಲಕ್ಕೆ ನುಗ್ಗಿದ್ದರಿಂದ ಅದನ್ನು ಓಡಿಸಲು ಹೋದಾಗ ಕೋಣವು ಆತನ ಮೇಲೆ ದಾಳಿ ಮಾಡಿದ್ದರಿಂದ ಚಿಕಿತ್ಸೆಗೆ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಕಳ್ಳನ ಬಂಧನ
ರಾಯಚೂರು: ತಾಲೂಕಿನ ಶಕ್ತಿನಗರದಲ್ಲಿ ನಡೆದಿದ್ದ ಕಳವಿನ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸರು ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಸುರೇಶ್ ಎಂದು ಗುರುತಿಸಲಾಗಿದೆ. ಈತ ಯಾದಗಿರಿ ಜಿಲ್ಲೆಯವನಾಗಿದ್ದು, ಬೆಂಗಳೂರಿನ ಶಿವಾಜಿ ನಗರದ ಪ್ರದೇಶದಲ್ಲಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಈತನ ಬಳಿ ಶಕ್ತಿನಗರದಲ್ಲಿ ಕಳವಾಗಿದ್ದ ಡೆಲ್ ಕಂಪನಿಯ ಕಂಪ್ಯೂಟರ್ ಮಾನಿಟರ್, ಬೆಳ್ಳಿಯ ದೀಪ, ಬೆಳ್ಳಿ ಬಟ್ಟಲು ಸೇರಿದಂತೆ ಒಟ್ಟು ಎರಡು ಪ್ರಕರಣಗಳಲ್ಲಿ ಕಳುವಾದ 32 ಸಾವಿರ ಬೆಲೆಯ ಆಸ್ತಿ ಜಪ್ತಿ ಮಾಡಿದ್ದಾರೆ. ಈ ಕುರಿತು ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೂಜು-ಆರು ಜನರ ಬಂಧನ
ರಾಯಚೂರು: ಸಿಂಧನೂರು ನಗರದ ಎಪಿಎಂಸಿಯ ರೈತ ಭವನದ ಹಿಂಂದೆ ಇಸ್ಪೀಟ್ ಆಡುತ್ತಿದ್ದ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಿರುಪತಿ, ವಿರುಪನಗೌಡ, ಅಕ್ಬರ್ ಸಾಬ್, ಬಸವರಾಜ್, ಶರಣಪ್ಪ, ಮತ್ತು ಶಿವಣ್ಣ ಎಂದು ಗುರುತಿಸಲಾಗಿದೆ. ಇವರು ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಅವರಿಂದ 8,700 ನಗದು ಜಪ್ತಿ ಮಾಡಿದ್ದಾರೆ. ಈ ಕುರಿತು ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಸ್ಪೀಟ್: 8 ಜನರ ಬಂಧನ
ರಾಯಚೂರು: ತಾಲೂಕಿನ ಎಲ್.ಕೆ. ದೊಡ್ಡಿ ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ 8 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ಗ್ರಾಮದ ತಿಮ್ಮಪ್ಪ ಮತ್ತಿತರೆ 7 ಜನರೆಂದು ಗುರುತಿಸಲಾಗಿದೆ. ಇವರು ಗ್ರಾಮದಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ 3375 ನಗದು ಜಪ್ತಿ ಮಾಡಿದ್ದಾರೆ. ಈ ಕುರಿತು ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಆರ್ಬಿಗೆ 'ಬಿ' ಶ್ರೇಣಿ
ರಾಯಚೂರು: ನಗರದ ತಾರಾನಾಥ ಶಿಕ್ಷಣ ಸಂಸ್ಥೆಯ ಬಿಆರ್ಬಿ ಮಹಾವಿದ್ಯಾಲಯಕ್ಕೆ ನ್ಯಾಕ್ ಪರಿಣಿತರ ತಂಡವು 'ಬಿ' ಶ್ರೇಣಿಯನ್ನು ನೀಡಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. ಕಳೆದ ವರ್ಷದ ಡಿ.20, 21 ಮತ್ತು 22ರಂದು ಕಾಲೇಜಿಗೆ ಭೇಟಿ ನೀಡಿದ್ದ ನ್ಯಾಕ್ ತಂಡವು ಪರಿಶೀಲನೆ ನಡೆಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

