ರಾಯಚೂರು

ವಿಶ್ವಕರ್ಮರನ್ನು ಹೊಗಳಿ ಹೊನ್ನ ಶೂಲಕ್ಕೇರಿಸಬೇಡಿ

Published On :

ಕನ್ನಡಪ್ರಭ ವಾರ್ತೆ ಟಿ ಗುಲ್ಬರ್ಗ ಟಿ ಮಾ.25
ವಿಶ್ವಕರ್ಮ ಶಿಕ್ಷಣ ಹಾಗೂ ಅಭಿವೃದ್ಧಿ ಸಂಸ್ಥೆಯ ಸಂಚಾಲಿತ ದೇವಾನಂದ ಪ್ರೌಢಶಾಲೆ, ಗಾಯತ್ರಿ ಶಿಶುವಿಹಾರ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ 19ನೇ ಸಾಂಸ್ಕೃತಿಕೋತ್ಸವ ಆಚರಿಸಲಾಯಿತು.
ಜವಳಗೇರಾ ಮೂಲಮಠದ ಸೂರ್ಯನಾರಾಯಣ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆರ್ಶೀವಚನ ನೀಡಿ, ವಿಶ್ವಕರ್ಮರನ್ನು ಹೊಗಳಿ ಹೊನ್ನ ಶೂಲಕ್ಕೇರಿಸಬೇಡಿ, ಗಂಭೀರ ಪರಿಸ್ಥಿತಿಯಲ್ಲಿರುವ ಕುಶಲಕರ್ಮಿಗಳಿಗೆ ಪ್ರೋತ್ಸಾಹ, ಸೌಲಭ್ಯ, ಗೌರವ ನೀಡುವ ಮೂಲಕ ಅವರನ್ನು ಬೆಳೆಸಿ ಎಂದರು.
ವಿಶ್ವಕರ್ಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೀರೇಂದ್ರ ಇನಾಂದಾರ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಡಾ. ಶಶೀಲ್ ನಮೋಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕಸಾಪ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ಮಾತನಾಡಿದರು.
ಮಹಾನಗರ ಪಾಲಿಕೆ ಸದಸ್ಯ ವೀರಣ್ಣ ಹೊನ್ನಳ್ಳಿ, ರವೀಂದ್ರ ಸಿ. ಹೊನ್ನಳ್ಳಿ, ವಿಠ್ಠಲ್ ಸುತಾರ, ಲಕ್ಷ್ಮೀಕಾಂತ ಸೀತನೂರ, ವಿಠ್ಠಲರಾವ ಸುತಾರ, ಸುಭಾಷ ಪಂಚಾಳ, ಅಶೋಕ ನರಿಬೋಳ, ದೇವಿಂದ್ರಪ್ಪ ಪತ್ತಾರ, ಮೋನಪ್ಪ ಸುರಪುರ, ಎಂ.ಜಿ. ಪತ್ತಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಶಶಿಕಲಾ ಎಸ್. ವೈಜಾಪುರ ಕಾರ್ಯಕ್ರಮ ನಿರೂಪಿಸಿದರು. ವಿಜಯಲಕ್ಷ್ಮೀ ಮುನ್ನೂರ ಸ್ವಾಗತಿಸಿದರು.  ಸುಗಂಧಾ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.