ರಾಯಚೂರು

ಚಿಂಚೋಳಿ ಎಪಿಎಂಸಿ ಕುಡುಕರ ತಾಣ

Published On :

ಚಿಂಚೋಳಿ: ರೈತರು ಬೆಳೆದಿರುವ ಆಹಾರ ಧಾನ್ಯಗಳನ್ನು ಮಾರಾಟ ಮಾಡಿಕೊಳ್ಳುವ ಸಲುವಾಗಿ ಕಳೆದ ಒಂದು ದಶಕಗಳ ಹಿಂದೆ ಸ್ಥಾಪಿತವಾಗಿರುವ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಇದೀಗ ವ್ಯಾಪಾರ ವಹಿವಾಟುವಿಲ್ಲದೆ ಬಣಗುಡುತ್ತಿದ್ದು, ಕುಡುಕರ ತಾಣವಾಗಿ ಪರಿವರ್ತನೆಗೊಂಡಿದೆ. ಚಿಂಚೋಳಿ ಹೊರವಲಯ ಚಂದಾಪುರ ನಗರದಲ್ಲಿ 9 ಎಕರೆ ಜಮೀನು ಪ್ರದೇಶದಲ್ಲಿ ಮಾಜಿ ಸಚಿವ ವೈಜನಾಥ ಪಾಟೀಲ್ ಅವರ ಸತತ ಪ್ರಯತ್ನದಿಂದಾಗಿ ಮಾಜಿ ಮುಖ್ಯಮಂತ್ರಿ ದಿ. ಜೆ.ಎಚ್. ಪಟೇಲ್ ಹಾಗೂ ಮಾಜಿ ಸಚಿವ ದಿ. ಎಚ್. ನಾಗಪ್ಪ ಅವರಿಂದ 1996-97ನೇ ಸಾಲಿನಲ್ಲಿ ಉದ್ಘಾಟನೆಗೊಂಡಿತ್ತು. ಇಲ್ಲಿನ ಮಾರುಕಟ್ಟೆ ಪ್ರಾಂಗಣ ಅಭಿವದ್ಧಿಗಾಗಿ 12 ಲಕ್ಷ ಮಂಜೂರಿಗೊಳಿಸಿ ತೊಗರಿ ಮತ್ತು ಹೆಸರು, ಉದ್ದು ವ್ಯಾಪಾರ ವಹಿವಾಟಿಗೆ ಚಾಲನೆ ದೊರಕಿತ್ತು. ಮಾರುಕಟ್ಟೆಯಲ್ಲಿ ಯಾವುದೇ ಸೌಲಭ್ಯವಿಲ್ಲದೆ ವ್ಯಾಪಾರಕ್ಕೆ ತೊಂದರೆಯಾಗಿದೆ. ಸರ್ಕಾರದಿಂದ ಕಳೆದ 15 ವರ್ಷಗಳಿಂದ ವಿವಿಧ ಯೋಜನೆಗಳಿಂದ ಲಕ್ಷಾಂತರ ರು. ನೀಡಿದರೂ ಇದುವರೆಗೆ ಆಭಿವೃದ್ಧಿ ಕಂಡಿಲ್ಲ. ಚಿಂಚೋಳಿ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಪ್ರಾರಂಭಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಚುನಾಯಿತ ಜನಪ್ರತಿನಿಧಿಗಳು ಗಮನಹರಿಸಬೇಕಾಗಿದೆ.
ಕೇಂದ್ರ ಸ್ಥಾನ ಬಿಡದಂತೆ ಸೂಚನೆ
ಯಾದಗಿರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವ ಎಲ್ಲ ಸಿಬ್ಬಂದಿಗೆ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೆ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಲು ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಫ್.ಆರ್.ಜಮಾದಾರ್ ಸೂಚಿಸಿದ್ದಾರೆ. ವಿಧಾನಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಚುನಾವಣಾ ಪ್ರಕ್ರಿಯೆನ್ನು ಜಿಲ್ಲಾಡಳಿತ ನಿರ್ವಹಿಸುತ್ತಿದ್ದು, ಜಿಲ್ಲೆಯ ಎಲ್ಲ ವಿವಿಧ ಮಟ್ಟದ ಅಧಿಕಾರಿಗಳ ಹಾಗೂ ಸಿಬ್ಬಂದಿ ಭಾಗವಹಿಸುವಿಕೆ ಅಗತ್ಯವಿದೆ. ಚುನಾವಣೆಗೆ ಸಂಬಂಧಿಸಿದ ಆದೇಶ ಸ್ವೀಕೃತವಾದ ತಕ್ಷಣ ಅನುಪಾಲಿಸಲು ಲಭ್ಯವಾಗುವಂತೆ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಅಧೀನ ಕಾರ್ಯಾಲಯಗಳಿಗೆ ಸುತ್ತೋಲೆಯನ್ನು ಹೊರಡಿಸಿ ಪೂರ್ವಾನುಮತಿ ಇಲ್ಲದೇ ಕೇಂದ್ರ ಸ್ಥಾನ ಬಿಡದಿರುವಂತೆ ಹಾಗೂ ವೈದ್ಯಕೀಯ ಕಾರಣ ಹೊರತುಪಡಿಸಿ ಬೇರೆ ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲು ತಿಳಿಸಿದ್ದಾರೆ. ಒಂದು ವೇಳೆ ಚುನಾವಣಾ ಕರ್ತವ್ಯದಲ್ಲಿ ಬೇಜವಾಬ್ದಾರಿ ವಹಿಸುವ ಅಧಿಕಾರಿಗಳು ಅಥವಾ ಸಿಬ್ಬಂದಿ ಮೇಲೆ ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 134ರ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಬೀಳ್ಕೊಡುಗೆ ಸಮಾರಂಭ
ಗುಲ್ಬರ್ಗ/ಶಹಾಬಾದ್: ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಇದರ ಪ್ರಯುಕ್ತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಉತ್ತಮ ಹಾಜರಾತಿ ಹೊಂದಿದ ಮಕ್ಕಳಿಗೆ ಮುಖ್ಯಗುರುಗಳಾದ ಜಿ.ಜಿ. ವಣಿಕ್ಯಾಣಿ ಹಾಗೂ ಶಿಕ್ಷಕ ದಯಾನಂದ ಬಹುಮಾನ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಗುರು ಜಿ.ಜಿ. ವಣಿಕ್ಯಾಳ ಮಕ್ಕಳಿಗೆ ಭವಿಷ್ಯ ರೂಪಿಸುವ ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಗಮನದಿಂದ ಓದುವಂತೆ ಕರೆ ನೀಡಿದರು. ಅತಿಥಿಗಳಾಗಿ ಶಿಕ್ಷಕಿ ಲೂಬಿನಾ ಬೇಗಂ, ರುಕುಂ ಪಟೇಲ್, ಲಲಿತಾಬಾಯಿ, ಸಬಿರ್ ಬಾನು, ಇಬ್ರಾಹಿಂ ಸಾಬ್, ಸಾದಿಯ ಸಬಿನಾ ಉಪಸ್ಥಿತರಿದ್ದರು. ಶಾಲೆಯ ಕನ್ನಡ ಮತ್ತು ಉರ್ದು ವಿಭಾಗದ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ರಾಘವೇಂದ್ರ ಪ್ರಾರ್ಥಿಸಿದರು. ಹೇಮನಾಥ ರಾಠೋಡ ಸ್ವಾಗತಿಸಿದರು. ವಾಣಿಶ್ರೀ ಪ್ರಾಸ್ತಾವಿಕ ಮಾತನಾಡಿದರು. ದಯಾನಂದ ನಿರೂಪಿಸಿದರು. ಸಾವಿತ್ರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.