ರಾಯಚೂರು

ಪತ್ರಕರ್ತರ ಮೇಲೆ ಹಲ್ಲೆ; ಸಂಘಟನೆಗಳಿಂದ ಖಂಡನೆ

Published On :

ಕ.ಪ್ರ. ವಾರ್ತೆ   ರಾಯಚೂರು   ಮಾ.25
ನಗರದ ಇನ್ ವಾಹಿನಿ ವರದಿಗಾರ ಉಪೇಂದ್ರ ಕೇಶವರಾವ್ ಅವರ ಮೇಲೆ ದುಷ್ಕರ್ಮಿಗಳು ಮಾಡಿದ ಹಲ್ಲೆ ಘಟನೆಯನ್ನು ಭಾರತ ಕಮ್ಯೂನಿಸ್ಟ್ ಪಕ್ಷ ಸೇರಿದಂತೆ ವಿವಿಧ ಸಂಘಟನೆಗಳು ಖಂಡಿಸಿವೆ.
ಈ ಕುರಿತು ಸೋಮವಾರ ನಗರದಲ್ಲಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಸಂಘಟನೆ ಕಾರ್ಯಕರ್ತರು, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯು ಪಡಿತರ ಚೀಟಿ ವಿತರಣೆ ಪ್ರಕ್ರಿಯೆ ಆರಂಭಿಸಿದ್ದು, ಚೀಟಿ ವಿತರಣೆಗೆ ಹೆಚ್ಚಿನ ಹಣ ಸಂಗ್ರಹಿಸಲಾಗುತ್ತಿದೆ. ಇದರಿಂದ ಬಡವರಿಗೆ ಅನ್ಯಾಯವಾಗುತ್ತಿದೆ ಎಂಬ ವಿಚಾರದ ಬಗ್ಗೆ ವರದಿ ಮಾಡಿದ ಉಪೇಂದ್ರ ಅವರು ವರದಿ ಮಾಡಿದ ಹಿನ್ನೆಲೆ ಹಲ್ಲೆ ಮಾಡಲಾಗಿದೆ ಎಂದು ದೂರಿದರು.
ಹಣ ಪಡೆದು ಚೀಟಿ ಹಂಚಿಕೆ: ಗ್ರಾಪಂ ವ್ಯಾಪ್ತಿಯಲ್ಲಿಯೂ ಗ್ರಾಪಂ ಸದಸ್ಯರು ಗ್ರಾಮಸ್ಥರಿಂದ 2 ಸಾವಿರದಿಂದ 3 ಸಾವಿರವರೆಗೆ ಹಣ ಪಡೆದು ಪಡಿತರ ಚೀಟಿ ಹಂಚಿಕೆ ಮಾಡುವ ಕಾರ್ಯದಲ್ಲಿ ತೊಡಗಿದ್ದು ಅದರಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆಂದು ದೂರಿದರು.
ಇಂಥ ಅಕ್ರಮಗಳ ಬಗ್ಗೆ ವರದಿ ಮಾಡುವ ವರದಿಗಾರರ ಮೇಲೆ ಹಲ್ಲೆ ಮಾಡಲಾಗಿದೆ. ಇದರಿಂದ ಪತ್ರಕರ್ತರು ಅಭದ್ರತೆಯಲ್ಲಿ ಕಾರ್ಯನಿರ್ವಹಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಪತ್ರಕರ್ತರಿಗೆ ರಕ್ಷಣೆ ನೀಡಬೇಕು. ಹಲ್ಲೆಕೋರರನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿದರು.
ಪ್ರಾಂತ ರೈತ ಸಂಘ, ಬಿಸಿಯೂಟ ನೌಕರರ ಸಂಘ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರಾದ ಕೆ.ಜಿ. ವೀರೇಶ್, ಕರಿಯಪ್ಪ ಅಚ್ಚೊಳ್ಳಿ, ಎಚ್.ಪದ್ಮಾ, ಶರಣಬಸವ, ಜೆ.ಎಂ. ಚನ್ನಬಸಯ್ಯ, ವರಲಕ್ಷ್ಮಿ ಸೇರಿದಂತೆ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.