ವಡವಾಟಿ ಗ್ರಾಮದ ಕಾಮಗಾರಿಯಲ್ಲಿ 2 ಅನುದಾನ ದುರ್ಬಳಕೆ: ಜೈಕರವೇ
'ಖಾತ್ರಿ'ಯಲ್ಲಿ ಅಕ್ರಮ: ತನಿಖೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ರಾಯಚೂರು ಮಾ.25
ತಾಲೂಕಿನ ಬಾಯಿದೊಡ್ಡಿ ಗ್ರಾಪಂ ವ್ಯಾಪ್ತಿಯ ವಡವಾಟಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ಗ್ರಾಪಂ ಸದಸ್ಯರು ಕೂಲಿ ಕಾರ್ಮಿಕರಿಂದ ಕಾಮಗಾರಿ ಮಾಡಿಸಿಕೊಂಡು 2 ಲಕ್ಷ ಅನುದಾನದ ದುರ್ಬಳಕೆ ಮಾಡಿಕೊಳ್ಳಲು ಯತ್ನಿಸಿದ್ದು, ಈ ಬಗ್ಗೆ ಸೂಕ್ತ ಕ್ರಮಕ್ಕೆ ಜೈಕರವೇ ಆಗ್ರಹಿಸಿದೆ.
ಈ ಕುರಿತು ಸೋಮವಾರ ಜಿಪಂ ಸಿಇಒಗೆ ಮನವಿ ಸಲ್ಲಿಸಿದ ಕೂಲಿಕಾರ್ಮಿಕರು ಹಾಗೂ ಸಂಘಟನೆಯ ಪದಾಧಿಕಾರಿಗಳು, ಗ್ರಾಮದಲ್ಲಿ ಒಟ್ಟು 4 ಲಕ್ಷ ವೆಚ್ಚದ ಕಾಮಗಾರಿಯ ಪೈಕಿ 2 ಲಕ್ಷ ವೆಚ್ಚದ ಕಾಮಗಾರಿಯನ್ನು ಕೈಗೊಂಡಿರುವ ಗ್ರಾಪಂ ಸದಸ್ಯರು ಕೂಲಿಕಾರ್ಮಿಕರಿಗೆ ಕೂಲಿ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆಂದು ಆರೋಪಿಸಿದರು.
2 ಲಕ್ಷ ಅನುದಾನ ದುರ್ಬಳಕೆ?: ಕೂಲಿ ಕಾರ್ಮಿಕರಿಗೆ ಪೂರ್ಣ ಪ್ರಮಾಣದ ಕೆಲಸ ನೀಡದೇ ಬಾಕಿ ಕಾಮಗಾರಿಯನ್ನು ಜೆಸಿಬಿ ಯಂತ್ರದಿಂದ ಕಾಮಗಾರಿ ನಿರ್ವಹಿಸಲಾಗಿದೆ. ಆ ಮೂಲಕ 2 ಲಕ್ಷ ಅನುದಾನ ದುರ್ಬಳಕೆ ಮಾಡಿಕೊಳ್ಳುವ ಕಾರ್ಯಕ್ಕೆ ಗ್ರಾಪಂ ಸದಸ್ಯರು ಮುಂದಾಗಿದ್ದಾರೆಂದು ದೂರಿದರು.
ಭೀಕರ ಬರ ಪರಿಸ್ಥಿತಿಯ ದಿನಗಳಲ್ಲಿ ಕೂಲಿಕಾರ್ಮಿಕರು ಕೈಗಳಿಗೆ ಕೆಲಸವಿಲ್ಲದೇ ಸಂಕಷ್ಟದಲ್ಲಿದ್ದು, ಇಂಥ ಪರಿಸ್ಥಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಂಡು ಕೂಲಿಕಾರ್ಮಿಕರಿಗೆ ಕೂಲಿ ಹಣ ಪಾವತಿಸಬೇಕಾದ ಗ್ರಾಪಂ ಪಿಡಿಒ ಸೇರಿದಂತೆ ಸದಸ್ಯರು ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಪಂ ಆಡಳಿತ ಕೂಡಲೇ ಸಂಬಂಧಿಸಿದ ಗ್ರಾಪಂ ಪಿಡಿಒ ಹಾಗೂ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಈಶ್ವರ್, ಎ.ರಮೇಶ್, ಹನುಮಂತು ವಡವಾಟಿ, ಎಂ.ವಸಂತ ಕುಮಾರ್, ನರಸಪ್ಪ ಸೇರಿದಂತೆ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

