ರಾಯಚೂರು

ಅಧ್ಯಯನಕ್ಕೆ ನಿರ್ದಿಷ್ಟ ಗುರಿ ಅಗತ್ಯ

Published On :

ಕನ್ನಡಪ್ರಭ ವಾರ್ತೆ,ರಾಯಚೂರು,ಮಾ.26
ರಾಂಪುರದಲ್ಲಿರುವ ನಂದಿನಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭ ನಡೆಯಿತು.
ಗುಲ್ಬರ್ಗ ವಿವಿ ಕುಲಸಚಿವ ಡಾ. ದಯಾನಂದ ಅಗಸರ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಕರು ರಾಷ್ಟ್ರ ನಿರ್ಮಾಣ ಮಾಡುವವರಾಗಿದ್ದು, ಪ್ರತಿ ವಿದ್ಯಾರ್ಥಿಯನ್ನು ಭಾರತದ ಸತ್ಪ್ರಜೆಯಾಗಿಸುವ ಕಾರ್ಯ ಮಾಡಬೇಕು. ನಿರ್ದಿಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಶಿಕ್ಷಕರು ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.
ಪ್ರೀತಿ, ಘನತೆ ಮತ್ತು ಗೌರವಗಳನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ನಿಟ್ಟಿನಲ್ಲಿ ಶಿಕ್ಷಕರು ಶ್ರಮಿಸಬೇಕು. ಕೇವಲ ನೌಕರಿ ಪಡೆಯಲು ಅಧ್ಯಯನ ಮಾಡುವುದು ಸರಿಯಲ್ಲ. ಆದರೆ ಸಮಾಜಕ್ಕೆ ಕೊಡುಗೆ ನೀಡುವಂಥ ಕಾರ್ಯವನ್ನು ಎಲ್ಲರೂ ಮಾಡಬೇಕಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಪಂ ಉಪಾಧ್ಯಕ್ಷ ಕೆ. ಶರಣಪ್ಪ ಮಾತನಾಡಿ, ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಯನ್ನು ಎಲ್ಲ ರೀತಿಯಿಂದ ಅಭಿವೃದ್ಧಿಯತ್ತ ಕೊಂಡೊಯ್ಯುವ ಹೊಣೆ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮೈಗೂಡಿಸಿಕೊಳ್ಳಬೇಕು. ಶಿಕ್ಷಕರ ಸೂಚನೆಯಂತೆ ಅಧ್ಯಯನ ಮಾಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅವರು ಸಲಹೆ ನೀಡಿದರು.
ಸ್ಪಿಲ್ ಕಾಲೇಜಿನ ಪ್ರಾಚಾರ್ಯ ಅಯ್ಯಪ್ಪ ತುಕ್ಕಾಯಿ, ನಿವೃತ್ತ ಮುಖ್ಯೋಪಾಧ್ಯಾಯ ರಾಜಾರಾವ್ ಇದ್ದರು. ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.