ರಾಯಚೂರು

ಹೋಳಿ; ಯೋಗ ಶಿಬಿರ ಇಂದು

Published On :

ಸಿಂಧನೂರು: ಪತಂಜಲಿ ಯೋಗ ಸಮಿತಿಯಿಂದ ಸಿಂಧನೂರು ನಾಗರಿಕರಿಗೆ 3 ದಿನದ ವಿಶೇಷ ಉಚಿತ ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಪತಂಜಲಿ ಯೋಗ ಸಮಿತಿಯ ರಾಜ್ಯ ಯುವ ಪ್ರಭಾರಿ ಎಂ.ಭಾಸ್ಕರ್ ತಿಳಿಸಿದ್ದಾರೆ. ವೆಂಕಟೇಶ್ವರ ಕಾಲೋನಿಯ ಸರ್ವೋದಯ ಪ್ರೌಢಶಾಲೆಯಲ್ಲಿ ಮಾ.27 ಬುಧವಾರದಿಂದ 29 ಶುಕ್ರವಾರ ದವರೆಗೆ ಬೆಳಿಗ್ಗೆ 5.30ರಿಂದ 7 ಗಂಟೆಯವರೆಗೆ ಯೋಗ ತರಬೇತಿ ನಡೆಯಲಿದೆ ಎಂದು ತಿಳಿಸಿದ್ದಾರೆ. ಹೊಸಪೇಟೆಯಿಂದ ಪತಂಜಲಿ ಯೋಗ ಸಮಿತಿಯ ರಾಜ್ಯ ಮಹಿಳಾ ಪ್ರಭಾರಿ ದಾಕ್ಷಾಯಣಿ ಶಿವಕುಮಾರ ಆಗಮಿಸಲಿದ್ದು, ಮಹಿಳೆಯರಿಗೆ ಹೆಚ್ಚಿನ ಅನುಕೂಲ ಆಗಲಿದೆ ಹಾಗೂ ರಾಜ್ಯದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಮಾ.28 ಗುರುವಾರದಂದು ಹೋಳಿ ಹಬ್ಬದ ಪ್ರಯುಕ್ತ ಬೆ.7 ರಿಂದ 12 ರವರೆಗೆ ವಿಶೇಷ ಯೋಗ ಸಾಂಸ್ಕೃತಿಕ ಕಾರ್ಯಕ್ರಮವಿದ್ದು, ಕಾರ್ಯಕ್ರಮಕ್ಕೆ ಯುವಕ, ಯವತಿಯರು, ಮಹಿಳೆಯರು, ಪುರುಷರು, ವಿದ್ಯಾರ್ಥಿಗಳು, ಯೋಗ ಸಾಧಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದ್ದಾರೆ.
ನಾಳೆಯಿಂದ ಜಿಲ್ಲಾ 'ಲೋಕಾ' ಪ್ರವಾಸ
ರಾಯಚೂರು: ಜಿಲ್ಲಾ ಲೋಕಾಯುಕ್ತರು ಮಾ.28ರಿಂದ ಜಿಲ್ಲೆಯ ವಿವಿಧೆಡೆ ಸಾರ್ವಜನಿಕ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಜಿಲ್ಲಾ ಲೋಕಾಯುಕ್ತರು ಮಾ.28ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1 ರವರೆಗೆ ಸಿಂಧನೂರಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲಿದ್ದಾರೆ. ಮಾನವಿಯಲ್ಲಿ ಅದೇ ದಿನ ಮಧ್ಯಾಹ್ನ 3ರಿಂದ  ಸಂಜೆಯ 5.30ರವರೆಗೆ ಕುಂದುಕೊರತೆ ಆಲಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ. ಮಾ.30 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಲಿಂಗಸ್ಗೂರಿನ ಪ್ರವಾಸಿ ಮಂದಿರದಲ್ಲಿ ಅಂದು ಮಧ್ಯಾಹ್ನ 3ರಿಂದ 5.30ರವರೆಗೆ ದೇವದುರ್ಗದಲ್ಲಿ ಅರ್ಜಿ ಸ್ವೀಕರಿಸಲಿದ್ದು, ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಸಲ್ಲಿಸಲು ಲೋಕಾಯುಕ್ತ ಕಚೇರಿ ಮನವಿ ಮಾಡಿದೆ.
ನಾಳೆ 'ಪೂರ್ವ' ಸಭೆ
ರಾಯಚೂರು: ನಗರದಲ್ಲಿ ಆಚರಿಸಲಾಗುವ ಡಾ.ಜಗಜೀವನರಾಂ ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಸಭೆಯು ಮಾ.28 ರಂದು ನಡೆಯಲಿದೆ. ಅಂದು ಸಂಜೆ 5ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.