ರಾಯಚೂರು

ಗ್ರಾಮೀಣ ಪ್ರದೇಶದಲ್ಲಿ ಕೆಜೆಪಿಗೆ ಉತ್ತಮ ಪ್ರತಿಕ್ರಿಯೆ: ಪಾಟೀಲ್

Published On :

ಕನ್ನಡಪ್ರಭ ವಾರ್ತೆ   ಸಿಂಧನೂರು   ಮಾ.27
ಸಿಂಧನೂರು ವಿಧಾನಸಭಾ ಕ್ಷೇತ್ರ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜಶೇಖರ ಪಾಟೀಲರಿಗೆ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಕೆಜೆಪಿ ಮುಖಂಡರಾದ ಸಿ.ಟಿ. ಪಾಟೀಲ ಅಭಿಪ್ರಾಯಪಟ್ಟರು.
ಕೆಜೆಪಿ ಕಾರ್ಯಾಲಯದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೆಲ ಮುಖಂಡರು ಬಿಎಸ್ಸಾರ್ ಕಾಂಗ್ರೆಸ್ ಜೊತೆಗೆ ಒಳಒಪ್ಪಂದ ಮಾಡಿ ಕೊಂಡಿದ್ದಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ಯಾವ ಪಕ್ಷದ ಜೊತೆಗೂ ಹೊಂದಾಣಿಕೆ ಮಾಡಿಕೊಂಡಿಲ್ಲ, ಸ್ವತಂತ್ರವಾಗಿ ಚುನಾವಣೆ ಎದುರಿಸುತ್ತಿದ್ದೇವೆ. ಕ್ಷೇತ್ರದಲ್ಲಿ ಮತದಾರರು ಬದಲಾವಣೆಯನ್ನು ಬಯಸಿದ್ದಾರೆ. ಹೋದ ಕಡೆಗೆಲ್ಲಾ ಮೆರವಣಿಗೆಯೊಂದಿಗೆ ಬರಮಾಡಿಕೊಳ್ಳುತ್ತಿದ್ದಾರೆ ಎಂದರು.
ಉತ್ತಮ ಪ್ರತಿಕ್ರಿಯೆ: ಕಳೆದ ಎರಡು ದಶಕದಿಂದ ನಿಸ್ವಾರ್ಥದಿಂದ ಸಮಾಜ ಸೇವೆಯಲ್ಲಿ ತೊಡಗಿರುವ ರಾಜಶೇಖರ ಪಾಟೀಲ ಮತ್ತು ಎರಡು ಅವಧಿಗೆ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ಸಹೋದರ ಮಲ್ಲಿಕಾರ್ಜುನ ಪಾಟೀಲ್ ಅವಿಸ್ಮರಣೀಯ ಕೆಲಸ ಮಾಡಿದ್ದಾರೆ ಎಂದು ಜನರೇ ಹೇಳುತ್ತಿದ್ದಾರೆ. ಕೇವಲ ವಾರ್ಡ್‌ಗೆ ಸೀಮಿತವಾಗದೆ ನಗರದ ಎಲ್ಲ ವಾರ್ಡಿನ ಜನತೆಯ ಹಕ್ಕಿಗಾಗಿ ದುಡಿದಿದ್ದಾರೆ. ರುದ್ರಗೌಡ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯರಾದ ತಮ್ಮ ಸಹೋದರ ಚೆನ್ನನಗೌಡ ಪಾಟೀಲ್ ಪ್ರತಿ ವರ್ಷ ಉಚಿತವಾಗಿ ನೇತ್ರ ಚಿಕಿತ್ಸಾ ಶಿಬಿರವನ್ನು ನಡೆಸುತ್ತಿದ್ದಾರೆ. ತಾಲೂಕಿನ ಜನರೊಂದಿಗೆ ಇಟ್ಟುಕೊಂಡಿರುವ ಪ್ರೀತಿ, ವಿಶ್ವಾಸವೇ ರಾಜಶೇಖರ ಪಾಟೀಲರ ಗೆಲವಿಗೆ ಶ್ರೀರಕ್ಷೆಯಾಗಲಿದೆ ಎಂದು ಸಿ.ಟಿ. ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಡಾ. ಚೆನ್ನನಗೌಡ ಪೊಲೀಸ್ ಪಾಟೀಲ್, ಸೈಲಾನಿ ಪಾಷಾ, ಅಣ್ಣಯ್ಯಸ್ವಾಮಿ, ಶರಣಪ್ಪ ಚೆನ್ನಳ್ಳಿ, ಅಮರೇಶ ದೇವರಗುಡಿ, ಮಹಿಬೂಬ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.