ರಾಯಚೂರು

ನಾನೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ: ತಿಮ್ಮಯ್ಯ ನಾಯಕ

Published On :

ಮಸ್ಕಿ: ಮುಂಬರುವ ಚುನಾವಣೆಯಲ್ಲಿ ತಾವೂ ಸಹ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ಕಾಂಗ್ರೆಸ್ ಮುಖಂಡ ತಿಮ್ಮಯ್ಯ ನಾಯಕ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಾವು ಕಳೆದ ಬಾರಿ ಮಸ್ಕಿ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದು ತಮಗೆ ಇನ್ನೊಂದು ಬಾರಿ ಪಕ್ಷದ ವರಿಷ್ಠರು ಅವಕಾಶ ನೀಡುವ ಭರವಸೆ ವ್ಯಕ್ತಪಡಿಸಿ, ತಮಗೆ ಹೈಕಮಾಂಡ್ ಸೂಚನೆಯಂತೆ ಟಿಕೆಟ್ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು. ಪಕ್ಷದ ಹೈಕಮಾಂಡ್ ನಿರ್ಧಾರ ಅಂತಿಮವಾಗಿದ್ದು, ವರಿಷ್ಠರು ಬೇರೆಯವರಿಗೆ ಟಿಕೆಟ್ ನೀಡಿದಲ್ಲಿ ಪಕ್ಷದ ಆದೇಶಕ್ಕೆ ಬದ್ಧನಾಗಿರುವುದಾಗಿ ತಿಳಿಸಿದ ಅವರು, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇಂದು ರೈತರ ಸಭೆ
ಮಸ್ಕಿ: ಪಟ್ಟಣದ ಕವಿತಾಳ ರಸ್ತೆಯಲ್ಲಿರುವ ಪಿಲ್ಲಿ ರಾಮರಾವ್ ಅವರ ರೈಸ್ ಮಿಲ್ ಆವರಣದಲ್ಲಿ ಮಾ.28ರಂದು 5ಎ ನೀರಾವರಿ ಯೋಜನೆಯ ಬಗ್ಗೆ ಚರ್ಚಿಸಲು ಮತ್ತು ಕನಕನಾಲಾ ಯೋಜನೆಯ ಅಭಿವೃದ್ಧಿಯ ಬಗ್ಗೆ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ರೈತರ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ. ಅಂದು ಬೆಳಗ್ಗೆ 10ಕ್ಕೆ ನಡೆಯುವ ಈ ಸಭೆಯು ರಾಜಕೀಯೇತರ ವಿಷಯದ ಸಭೆಯಾಗಿದ್ದು ಕ್ಷೇತ್ರದಲ್ಲಿರುವ ರೈತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಾರ್ಯಕ್ರಮದ ಆಶಯವನ್ನು ಯಶಸ್ವಿಗೊಳಿಸಬೆಕೆಂದು ಆಯೋಜಕರು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.