ರಾಯಚೂರು

ಅಕ್ರಮ ಮದ್ಯ: ಮೂವರ ಬಂಧನ

Published On :

ರಾಯಚೂರು: ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತರನ್ನು ಸಮದಾನಿ ನಾಯ್ಕ ಮತ್ತು ಮೌಲಾಸಾಬ್ ಎಂದು ಗುರುತಿಸಲಾಗಿದೆ.
ಇವರು ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ ವಿವಿಧ ಕಂಪನಿಗಳ ರು. 13880 ರು. ಬೆಲೆಯ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮತ್ತೊಂದು ಪ್ರಕರಣ: ಸಿಂಧನೂರು ತಾಲೂಕಿನ ಚಿರತನಾಳ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಸವರಾಜ ಎಂದು ಗುರುತಿಸಲಾಗಿದೆ. ಗ್ರಾಮದ ಪನ್ನೂರು ಅಮರಣ್ಣ  ಎಂಬುವವರ ಹೊಲದ ಹತ್ತಿರ ಹೋಳಿ ಹಬ್ಬದ ನಿಮಿತ್ತ ಮದ್ಯ ಮಾರಾಟ ನಿಷೇಧವಿದ್ದರೂ,  ಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ರು. 5555 ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.