ಕುಡಿವ ನೀರಿನ ಸಮಸ್ಯೆ ನಿವಾರಣೆಗೆ ಆದ್ಯತೆ
ಕನ್ನಡಪ್ರಭ ವಾರ್ತೆ ರಾಯಚೂರು ಮಾ.28
ಮುಂಬರುವ ಚುನಾವಣೆಯನ್ನು ಶಾಂತಿಯುತವಾಗಿ ಮತ್ತು ಸುಗಮವಾಗಿ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವತ್ತ ಮೊದಲ ಆದ್ಯತೆ ನೀಡುವುದಾಗಿ ನೂತನ ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್ ತಿಳಿಸಿದರು.
ಅವರು ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಈಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಮತದಾರರ ಪಟ್ಟಿಯಿಂದ ಹೆಸರುಗಳು ನಾಪತ್ತೆಯಾದ ವಿಚಾರವನ್ನು ತೀಕ್ಷ್ಣವಾಗಿ ಪರಿಗಣಿಸಲಾಗುತ್ತಿದೆ. ಮತದಾರರ ಪಟ್ಟಿಯಿಂದ ಕೈಬಿಟ್ಟ ಮತದಾರರ ಹೆಸರು ಪುನಾ ಸೇರ್ಪಡೆಗೆ ಅಭಿಯಾನ ರೂಪದಲ್ಲಿ ಕಾರ್ಯ ನಿರ್ವಹಿಸಲಾಗುತ್ತದೆ ಎಂದು ತಿಳಿಸಿದರು.
ಅದೇ ರೀತಿ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿಯುತ ಮತ್ತು ಮುಕ್ತ ಮತದಾನಕ್ಕೆ ಪೂರಕ ಪರಿಸರ ನಿರ್ಮಿಸುವ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ನೀತಿ ಸಂಹಿತೆಯ ಕಟ್ಟುನಿಟ್ಟಿನ ಪಾಲನೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಗಣೇಕಲ್ ಜಲಾಶಯ ಭರ್ತಿಗೆ ಮಾ.30ರ ನಂತರದಲ್ಲಿಯೂ ಪ್ರಯತ್ನಿಸಲಾಗುತ್ತದೆ. ಶೀಘ್ರದಲ್ಲಿಯೇ ತುಂಗಭದ್ರಾ ನೀರಾವರಿ ಇಲಾಖೆಯ ಹಿರಿಯ ಎಂಜಿನಿಯರ್ ಜತೆ ಸಮಾಲೋಚಿಸಿ ಗಣೇಕಲ್ ಜಲಾಶಯ ಭರ್ತಿ ಮೂಲಕ ರಾಯಚೂರು ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

