ಸ್ತ್ರೀಶಕ್ತಿ ಸಂಘಗಳು ಒಕ್ಕೂಟ ಮಾಡಿಕೊಳ್ಳಲಿ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಮಾ.28
ಗ್ರಾಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ತ್ರೀಶಕ್ತಿ ಸಂಘಗಳು ಕಾರ್ಯನಿರ್ವಹಿಸುತ್ತಿದ್ದರೆ ಅವುಗಳೆಲ್ಲವನ್ನೂ ಒಗ್ಗೂಡಿಸಿ ಒಕ್ಕೂಟ ಮಾಡಿಕೊಂಡು ಒಕ್ಕೂಟದ ಮೂಲಕ ವ್ಯವಹರಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಆಕುರಾತಿ ಅವರು ಸಲಹೆ ನೀಡಿದರು.
ಮಾರುಕಟ್ಟೆ ನೆರವಿನ ಯೋಜನೆಯಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಸ್ತ್ರೀಶಕ್ತಿ ಗುಂಪುಗಳು, ಮಹಿಳಾ ಮಂಡಳಗಳು, ಸ್ವಸಹಾಯ ಗುಂಪಿನ ಸದಸ್ಯರು ಮತ್ತು ಮಹಿಳಾ ಉದ್ದಿಮೆದಾರರಿಂದ ಉತ್ಪಾದಿಸಿದ ವಸ್ತುಗಳ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.
ಸದೃಢರಾಗಲು ಅನುಕೂಲ: ರಾಜ್ಯದಲ್ಲಿ ಶೇ.99 ರಷ್ಟು ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಕೇವಲ ಆಂತರಿಕ ಸಾಲವನ್ನು ಪಡೆದು ವ್ಯವಹರಿಸುವ ರೂಢಿ ಬೆಳೆಸಿಕೊಂಡಿವೆ. ಇದರಿಂದ ಇನ್ನೂ ಒಂದು ಹೆಜ್ಜೆ ಮುಂದಿರಿಸಿ ಉತ್ಪಾದನೆಯತ್ತ ಗಮನಹರಿಸಬೇಕು. ಇದರಿಂದಾಗಿ ಆರ್ಥಿಕವಾಗಿ ಸದೃಢರಾಗಲು ಅನುಕೂಲವಾಗುವುದು ಎಂದರು.
ಸ್ತ್ರೀಶಕ್ತಿ ಸಂಘಗಳು ಪರೋಕ್ಷವಾಗಿ ಗ್ರಾಮೀಣ ಮಹಿಳೆಯರಿಗೆ ಐಕ್ಯತಾಶಕ್ತಿ ಬೆಳೆಸುವ ಕಾರ್ಯ ಮಾಡುತ್ತವೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ಸಾಂಘಿಕ ದುರಾಚಾರಗಳನ್ನು ಹೋಗಲಾಡಿಸಬಹುದಾಗಿದೆ ಎಂದರು.
ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವುದು ಸ್ತ್ರೀಶಕ್ತಿ ಸಂಘಗಳಿಂದ ಮಾತ್ರ ಸಾಧ್ಯ. ಗ್ರಾಮೀಣ ಪ್ರದೇಶದಲ್ಲಿ ಕೃಷಿ, ವಿದ್ಯಾಭ್ಯಾಸ, ಆರೋಗ್ಯಗಳಂತಹ ಅವಶ್ಯಕ ಚಟುವಟಿಕೆಗಳನ್ನು ಸ್ವಸಹಾಯ ಗುಂಪುಗಳು ನಿರ್ವಹಿಸಿದಲ್ಲಿ ಹಾಗೂ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಿದರೆ ಗ್ರಾಮಗಳು ಅಭಿವೃದ್ಧಿಯಾಗಲು ಸಾಧ್ಯ ಎಂದರು.
ಡಿಅರ್ಡಿಎ ಯೋಜನಾ ನಿರ್ದೇಶಕ ಕೆಂಚಣ್ಣವರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರತ್ನಾ ಬಿ. ಕಲಂದಾನಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಪ್ಪಣ್ಣ ಸಿರಸಗಿ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

