ಗ್ರಾಮೀಣರ ಜೀವನಾಡಿಯಾಗಿ ಕೆಲಸ ನಿರ್ವಹಿಸಿ: ಕರಿಯಪ್ಪ
ಸಿಂಧನೂರು: ವಿವಿಧ ಸಂಘ ಸಂಸ್ಥೆಗಳು ಜನರ ಜೀವನಾಡಿಯಾಗಿ ಕೆಲಸ ಮಾಡಬೇಕು ಎಂದು ಬಿಎಸ್ಸಾರ್ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಕೆ.ಕರಿಯಪ್ಪ ಕರೆ ನೀಡಿದರು.
ತಾಲೂಕಿನ ಹಾರಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಯುವಕ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ಜನರ ಸಮಸ್ಯೆಗಳ ಪರಿಹಾರಕ್ಕೆ ಸಂಘಟನೆಗಳು ಪ್ರಾಮಾಣಿಕವಾಗಿ ಹೋರಾಟ ನಡೆಸಬೇಕು. ಅನಕ್ಷರಸ್ಥರಲ್ಲಿ ಇನ್ನೂ ಮೌಢ್ಯ ಆಚರಣೆಗಳ ಬಗ್ಗೆ ನಂಬಿಕೆ ಇದೆ. ಅವುಗಳನ್ನು ತೊಲಗಿಸುವಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ. ಯಾವುದೇ ಕೆಲಸ ಕಾರ್ಯಗಳಲ್ಲಿ ಸಮರ್ಪಣಾ ಮನೋಭಾವನೆಯಿಂದ ಕೆಲಸ ನಿರ್ವಹಿಸಿದಾಗ ಜನರ ಮನಸ್ಸಿನಲ್ಲಿ ಉಳಿಯಲು ಸಾಧ್ಯ ಎಂದು ಹೇಳಿದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಭೀಮಣ್ಣ ಸಂಗಟಿ ಅಧ್ಯಕ್ಷತೆ ವಹಿಸಿದ್ದರು. ವೀರಭದ್ರಯ್ಯಸ್ವಾಮಿ ಹಿರೇಮಠ, ನಿರುಪಾದೆಪ್ಪ ಗುಡಿಹಾಳ ವಕೀಲರು, ಕನಕಗುರು ಪೀಠದ ಟಿ.ಹನುಮಂತಪ್ಪ, ಕನಕ ಯುವಸೇನೆ ಅಧ್ಯಕ್ಷ ಬಾಗೋಡಿ, ಗ್ರಾಪಂ ಅಧ್ಯಕ್ಷ ನಿರುಪಾದೆಪ್ಪ ಮತ್ತಿತರರು ಉಪಸ್ಥಿತರಿದ್ದರು. ಹನುಮಂತಗೌಡ ಸ್ವಾಗತಿಸಿದರು. ರಮೇಶ ಕಾರ್ಯಕ್ರಮ ನಿರೂಪಿಸಿದರು. ರಾಮನಗೌಡ ಮಾಲಿಪಾಟೀಲ್ ವಂದಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

