ರಾಯಚೂರು

ಮುಸ್ಲಿಂ ಸಮುದಾಯ ಅಭ್ಯರ್ಥಿ ಸ್ಪರ್ಧೆ; ಚರ್ಚೆ

Published On :

ಸಿಂಧನೂರು: ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ 500ಕ್ಕೂ ಹೆಚ್ಚು ಜನರು ಶಾದಿಮಹಲ್ನಲ್ಲಿ ಸಭೆ ನಡೆಸಿ ತಮ್ಮ ಸಮಾಜದಿಂದ ಒಬ್ಬರಾದರೂ ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಸಬೇಕೆಂಬ ನಿಲುವು ತಾಳಲಾಗಿದೆ ಎಂದು ತಿಳಿದುಬಂದಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಕೆಜೆಪಿ ಹೊರತುಪಡಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಸಬೇಕೆಂದು ಕೆಲವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರೆಂದು ಗೊತ್ತಾಗಿದೆ. ನಗರಸಭೆ ಮಾಜಿ ಉಪಾಧ್ಯಕ್ಷ ಕೆ.ಜಿಲಾನಿ ಪಾಷಾ ಅವರನ್ನು ಅಭ್ಯರ್ಥಿಯಾಗುವಂತೆ ನೆರೆದಿದ್ದ ಸಭಿಕರು ಒತ್ತಾಯಿಸಿದರೆಂದು ಹೇಳಲಾಗಿದೆ. ಇಲ್ಲದಿದ್ದರೆ ರಾಜ್ಯ ರೈತ ಸಂಘದ ರಾಜ್ಯ ಸಂಚಾಲಕ ಅಮೀನ್ಪಾಷಾ ದಿದ್ದಗಿ ಅವರನ್ನು ಚುನಾವಣಾ ಕಣಕ್ಕಿಳಿಸಲು ಸಭೆಯಲ್ಲಿ ಚರ್ಚೆಯಾಗಿದೆ. ಜಿಲಾನಿ ಪಾಷಾ ಮತ್ತು ಅಮೀನ್ಪಾಷಾ ದಿದ್ದಗಿ ಒಪ್ಪದಿದ್ದರೆ ಮದೀನಾ ಎಂಟರ್ ಪ್ರೈಸಸ್ ಮಾಲೀಕರಾದ ಆರೀಫ್ ಅವರನ್ನು ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.