ವಿವಿಧ ಬೇಡಿಕೆ ಈಡೇರಿಕೆಗಾಗಿ ಧರಣಿ
ಕ.ಪ್ರ. ವಾರ್ತೆ ಸಿಂಧನೂರು ಮಾ.29
ನಗರದ ಮತ್ತು ಗ್ರಾಮೀಣ ಪ್ರದೇಶದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಂಧೂರ ಪ್ರಜಾರಕ್ಷಣಾ ಸೇನೆಯಿಂದ ಸ್ಥಳೀಯ ತಹಸೀಲ್ದಾರ್ ಕಚೇರಿ ಎದುರಿಗೆ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಗರದ ಸವೇ ನಂ. 768/3 ಸರ್ಕಾರಿ ಜಾಗದಲ್ಲಿರುವ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆ ಆವರಣವನ್ನು ಸ್ವಚ್ಛಗೊಳಿಸಿ ಸುತ್ತಲೂ ಕಾಂಪೌಂಡ್ ನಿರ್ಮಿಸಬೇಕು. ಉದ್ಯಾನವನಕ್ಕೆ ಮೀಸಲಿಟ್ರುವ ಸರ್ಕಾರಿ ಜಾಗಗಳಲ್ಲಿನ ಖಾಸಗಿ ಕಟ್ಟಡಗಳನ್ನು ತೆರವುಗೊಳಿಸಬೇಕು. ಮಿನಿ ವಿಧಾನಸೌಧ ಕಟ್ಟಡ ತೀವ್ರಗತಿಯಲ್ಲಿ ನಿರ್ಮಾಣ ಮಾಡಬೇಕು. 100 ವರ್ಷದ ಹಳೆಯ ತಹಸೀಲ್ದಾರ್ ಕಚೇರಿಯನ್ನು ಐತಿಹಾಸಿಕ ಸ್ಮಾರಕವನ್ನಾಗಿಸಬೇಕು. ತುರ್ವಿಹಾಳ ಗ್ರಾಮದ ಹತ್ತಿರ 224 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಕುಡಿಯುವ ನೀರಿನ ಕಾಮಗಾರಿಯನ್ನು ತೀವ್ರಗತಿಯಲ್ಲಿ ಆರಂಭಿಸಬೇಕು.
ಸಂಚಾರಿ ಪೊಲೀಸ್ ಠಾಣೆಯನ್ನು ನಿರ್ಮಿಸಬೇಕು. ನಗರ ಯೋಜನಾ ಪ್ರಾಧಿಕಾರವನ್ನು ನಗರಸಭೆ ವ್ಯಾಪ್ತಿಗೆ ಒಳಪಡಿಸಬೇಕು. ಕಡುಬಡವರಿಗೆ ವಿತರಿಸಿದ ಎಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಬೇಕು. ಸಿಂಗಾಪುರ ಡಿಸ್ಟಲರಿ ಫ್ಯಾಕ್ಟರಿಯಿಂದ ಅಕ್ರಮವಾಗಿ ನೀರು ಪಡೆಯುತ್ತಿರುವುದನ್ನು ತಡೆಯಬೇಕು. ಕಲುಷಿತ ನೀರನ್ನು ನದಿಗೆ ಬಿಡುತ್ತಿದ್ದು, ಕಾರ್ಖಾನೆ ಮಾಲೀಕರ ಮೇಲೆ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಾಸಾಶನ ಬಿಡುಗಡೆಗೆ ಆಗ್ರಹ: ತಾಲೂಕಿನ ಗುಂಡಾ, ಸಂಕನಾಳ, ರತ್ನಾಪುರ, ರತ್ನಾಪುರ ಹಟ್ಟಿ, ಗಂಟೆರಟ್ಟಿ ಮತ್ತಿತರ ಗ್ರಾಮಗಳಲ್ಲಿ ವೃದ್ಧಾಪ್ಯ ಮತ್ತು ವಿಧವಾ ವೇತನ ಮಂಜೂರು ಆದೇಶವನ್ನು ಕೂಡಲೇ ನೀಡಬೇಕು. ಸೋಮಲಾಪುರ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿ ಕಡುಬಡವ ಕುಟುಂಬಗಳಿದ್ದು ಅವರಿಗೆ ನಿವೇಶನ ಹಕ್ಕುಪತ್ರ ನೀಡುವುದು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಧರಣಿ ನಿರತರು ತಹಸೀಲ್ದಾರ್ ಲಿಂಗನಗೌಡರ ಮುಖಾಂತರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ವೇದಿಕೆಯ ತಾಲೂಕಾಧ್ಯಕ್ಷ ನಾಗರಾಜ ಬೊಮ್ಮನಾಳ, ಕಾರ್ಯಾಧ್ಯಕ್ಷ ಕೆ.ಬಸವರಾಜ, ಉಪಾಧ್ಯಕ್ಷರಾದ ಕಂಠೇಶ ಬಸಾಪುರ, ಶಿವು ಮೇಸ್ತ್ರಿ, ನೂರಪ್ಪ ಕಟ್ಟಿಮನಿ, ಪ್ರದೀಪ ಕುಮಾರ, ತಿಮ್ಮಾರೆಡ್ಡಿ ಸೋಮಲಾಪುರ, ರಾಜಶೇಖರ ಉಮಲೂಟಿ ಮತ್ತಿತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

