ಅಕ್ರಮ ಮದ್ಯ ಸಾಗಣೆ: 3 ಬಂಧನ
ರಾಯಚೂರು: ಮಾನವಿ ತಾಲೂಕಿನ ಗೋರ್ಕಲ್ ಕ್ರಾಸ್ನಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ಮೂವರನ್ನು ಬಂಧಿಸಿದ ಪೊಲೀಸರು ಅಪಾರ ಮದ್ಯ ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಶಂಕರ, ಮಲ್ಲೇಶ ಮತ್ತು ಭೀಮೇಶ ಎಂದು ಗುರುತಿಸಲಾಗಿದೆ. ಇವರು ಟಾಟಾ ಏಸ್ ವಾಹನದಲ್ಲಿ ಮದ್ಯವನ್ನು ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ವಾಹನ ತಡೆದು ವಿಚಾರಿಸಲಾಗಿ ವಾಹನದಲ್ಲಿದ್ದ 10 ಸಾವಿರಕ್ಕೂ ಹೆಚ್ಚಿನ ವಿವಿಧ ಕಂಪನಿಗಳ ಮದ್ಯ ಮತ್ತು ವಾಹನ ಜಪ್ತಿ ಮಾಡಿದ್ದಾರೆ. ಈ ಕುರಿತು ಮಾನವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಕಸ್ಮಿಕವಾಗಿ ಕೆರೆಗೆ
ಬಿದ್ದು ಬಾಲಕಿ ಸಾವು
ರಾಯಚೂರು: ದೇವದುರ್ಗ ತಾಲೂಕಿನ ಗಬ್ಬೂರಿನ ಕೆರೆಯಲ್ಲಿ ಆಕಸ್ಮಿಕವಾಗಿ ಬಿದ್ದು ಬಾಲಕಿ ಅಸುನೀಗಿದ್ದಾಳೆ. ಮೃತಳನ್ನು ಮಾಳಮ್ಮ ಎಂದು ಗುರುತಿಸಲಾಗಿದೆ. ಈಕೆ ಕೆರೆಯ ಬಳಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದು ಮೇಲೆ ಬರಲಾಗದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
'ಸಮಯ ಬದಲಿಸಿ'
ಗುಲ್ಬರ್ಗ: ಬೇಸಿಗೆ ಏಪ್ರಿಲ್ ಮತ್ತು ಮೇ ಎರಡು ತಿಂಗಳ ಅವಧಿಯಲ್ಲಿ ಸರ್ಕಾರಿ ಕಚೇರಿಗಳು ಬೆಳಗಿನ ಅವಧಿಯಲ್ಲಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಿ.ಎಸ್. ದೇಸಾಯಿ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

