ಇಂದು ಮಹಿಳಾ ದಿನ (ಸಂಕ್ಷಿಪ್ತ ಸುದ್ದಿ)
ಸಿಂಧನೂರು: ನಗರದ ಉಪ್ಪಾರವಾಡಿ ಶಾಲಾ ಆವರಣದಲ್ಲಿ ಮಾ.31ರಂದು ಮ.3.30ಕ್ಕೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರುಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಸುಭಾಷರೆಡ್ಡಿ ಪಾಟೀಲ್ ತಿಳಿಸಿದ್ದಾರೆ. ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ರಾಯಚೂರು, ಆರ್ಡಿಸಿಸಿ ಬ್ಯಾಂಕ್ ನಿಯಮಿತ ಸಿಂಧನೂರು ಹಾಗೂ ಪಟೇಲವಾಡಿಯ ಸ್ಫೂರ್ತಿ ಯುವತಿ ಮಂಡಳಿಯ ಸಂಯುಕ್ತಾಶ್ರಯದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ತಾಲೂಕಾಧ್ಯಕ್ಷೆ ರಮಾದೇವಿ ಶಂಭೋಜಿ ವಹಿಸುವರು. ವಚನಗೀತಾ ಎಂ ಸಾಲಿಮಠ ಉದ್ಘಾಟಿಸುವರು. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕುರಿತು ಡಾ. ಶಾಂತಲಾ ಮುಕ್ಕುಂದಿಮಠ ಉಪನ್ಯಾಸ ನೀಡುವರು. ಸ್ತ್ರೀ ಶಕ್ತಿ ಗುಂಪುಗಳಿಗೆ ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನ್ನಪೂರ್ಣ್ಣಮ್ಮ ಹೇಮವಾಡಗಿ ತರಬೇತಿ ನೀಡುವರು. ಮುಖ್ಯ ಅತಿಥಿಗಳಾಗಿ ರಾಯಚೂರು ಜಿಲ್ಲಾ ಸಹಕಾರ ಒಕ್ಕೂಟದ ನಿದೇಶಕರಾದ ಶರಣಪ್ಪ ಮೇಲಮನಿ, ಉಪ್ಪಾರವಾಡಿ ಶಾಲೆಯ ಮುಖ್ಯಗುರು ಅಂಬಣ್ಣ, ಭಾರತ ರಾಷ್ಟ್ರೀಯ ಮಹಿಳಾ ಒಕ್ಕೂಟದ ಅಧ್ಯಕ್ಷೆ ಎಂ.ಸಿ. ಸೀತಮ್ಮ, ಆರ್ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ವೀರೇಶ, ಕಸಾಪ ಕಾರ್ಯಕಾರಿ ಸಮಿತಿ ಸದಸ್ಯೆ ನಾಗರತ್ನಾ ಬಂಗಾರಶೆಟ್ಟಿ, ಗೀತಾ ಎಂ ಭಾಸ್ಕರ್ ಭಾಗವಹಿಸುವರು. ಮಹಿಳೆಯರು ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸ್ಫೂರ್ತಿ ಯುವತಿ ಮಂಡಳಿಯ ಕಾರ್ಯದರ್ಶಿ ಲಕ್ಷ್ಮೀ ದೇವಿ ಮನವಿ ಮಾಡಿದ್ದಾರೆ.
ಏ.2, ವಿದ್ಯುತ್ ವ್ಯತ್ಯಯ
ರಾಯಚೂರು: ಶಕ್ತಿನಗರ ಶಾಖೆಯಲ್ಲಿ ಪರಿವರ್ತಕಗಳಿಗೆ ಮಾಪಕಗಳನ್ನು ಅಳವಡಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಏ.2 ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜೆಸ್ಕಾಂ ತಿಳಿಸಿದೆ. ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಶಕ್ತಿನಗರ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಜೆಸ್ಕಾಂ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

