ರಾಯಚೂರು

ಎಸ್ಸೆಸ್ಸೆಲ್ಸಿ: 4,274 ವಿದ್ಯಾರ್ಥಿಗಳ ನೋಂದಣಿ

Published On :

ಕನ್ನಡಪ್ರಭ ವಾರ್ತೆ, ಲಿಂಗಸ್ಗೂರು, ಮಾ.30
ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಏ.1ರಿಂದ 10ರವರೆಗೆ ನಡೆಯಲಿದ್ದು, ತಾಲೂಕಿನ 73 ಪ್ರೌಢಶಾಲೆಗಳ ಪೈಕಿ 2,317 ವಿದ್ಯಾರ್ಥಿಗಳು ಮತ್ತು 1,957 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 4,274 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎನ್. ಪೊಲೀಸ್ ಪಾಟೀಲ್ ವಿವರಿಸಿದರು.
ಸ್ಥಳೀಯ ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಹಾಯಕ ಆಯುಕ್ತ ಟಿ.ಯೋಗೇಶ ಅಧ್ಯಕ್ಷತೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ವಿವರಿಸಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 12 ಪರೀಕ್ಷಾ ಕೇಂದ್ರಗಳ ವ್ಯವಸ್ಥೆ ಕೈಗೊಳ್ಳಲಾಗಿದ್ದು, ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪರೀಕ್ಷಾ ಕೇಂದ್ರಗಳು: ಲಿಂಗಸ್ಗೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢ ಶಾಲೆ ಮತ್ತು ಅಮರೇಶ್ವರ ಕನ್ಯಾ ಶಾಲೆ ಸೇರಿದಂತೆ ಒಟ್ಟು 3 ಪರೀಕ್ಷಾ ಕೇಂದ್ರಗಳು, ಹಟ್ಟಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಡಾ. ಇ.ಅ. ಸಿಮಂಡ್ಸ್ ಶಾಲೆ ಮತ್ತು ಸೇಂಟ್ ಅನ್ನಾಸ್ ಶಾಲೆ ಸೇರಿದಂತೆ ಒಟ್ಟು 3 ಪರೀಕ್ಷಾ ಕೇಂದ್ರಗಳು, ಮುದಗಲ್ನಲ್ಲಿ ಕ್ರಿಸ್ತ ಜ್ಯೋತಿ ಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ 2 ಪರೀಕ್ಷಾ ಕೇಂದ್ರಗಳು.
ರೋಡಲಬಂಡಾ(ಯುಕೆಪಿ) ಸರ್ಕಾರಿ ಪದವಿ ಪೂರ್ವ ಕಾಲೇಜು, ಸಜ್ಜಲಗುಡ್ಡದ ಸರ್ಕಾರಿ ಪದವಿ ಪೂರ್ವ ಕಾಲೇಜು, ಖೈರವಾಡಗಿಯ ಸರ್ಕಾರಿ ಹಿರಿಯ ಪ್ರೌಢಶಾಲೆ ಮತ್ತು ಮಸ್ಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ತಲಾ ಒಂದು ಪರೀಕ್ಷಾ ಕೇಂದ್ರದ ವ್ಯವಸ್ಥೆ ಕೈಗೊಳ್ಳಲಾಗಿದೆ.
ಮೂರು ಜಾಗೃತ ತಂಡ: ಒಟ್ಟು 12 ಪರೀಕ್ಷಾ ಕೇಂದ್ರಗಳಿಗೆ ತಾಲೂಕು ಮಟ್ಟದ ಮೂರು ಜಾಗೃತ ತಂಡ ರಚಿಸಲಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿಗಳು ಮತ್ತು ತಹಸೀಲ್ದಾರ್ ನೇತೃತ್ವದಲ್ಲಿ 5 ಜನರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ಪೂರೈಕೆಗೆ 6 ಮಾರ್ಗಗಳ ಪೈಕಿ 6 ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಬಿಇಒ ಪಾಟೀಲ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಸಹಾಯಕ ಆಯುಕ್ತ ಟಿ.ಯೋಗೇಶ ಮಾತನಾಡಿ, ಪರೀಕ್ಷೆ ಸಮಯದಲ್ಲಿ ಯಾವುದೇ ಅಕ್ರಮ ಚಟುವಟಿಕೆಗೆ ಆಸ್ಪದ ನೀಡದೆ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಬೇಕು. ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕುಡಿಯುವ ನೀರು, ಬೆಳಕು ಹಾಗೂ ಸ್ವಚ್ಛತೆ ್ತ ಕಾಪಾಡಬೇಕು. ನಿರ್ಲಕ್ಷ್ಯ ತೋರಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ತಹಸೀಲ್ದಾರ್ ಎನ್.ಬಿ. ಪಾಟೀಲ್, ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ವೀರಭದ್ರಪ್ಪ, ಶಿಕ್ಷಣ ಸಂಯೋಜಕರಾದ ಈಶ್ವರ ನಿರಡಗಿ, ಮಹಾಮುನಿಯಪ್ಪ, ವಿವಿಧ ಶಾಲೆಗಳ ಮುಖ್ಯಗುರುಗಳಾದ ಸರೋಜ ಪೋಳ್, ಪ್ರೇಮಲತಾ, ಬಾಲಚಂದ್ರ, ಎಂ.ಎಚ್. ಗೌಡರ್, ಎಂ.ಡಿ. ರಫೀ, ಅಮರೇಗೌಡ, ಬೂತಾಳಪ್ಪ, ರಿಯಾಜ ಅಹ್ಮದ್ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.