ಕಾನೂನು ಅರಿವು ಎಲ್ಲರಿಗೂ ಅಗತ್ಯ
ಸಿಂಧನೂರು: ಸಮಾಜದ ಪ್ರತಿಯೊಬ್ಬ ವ್ಯಕ್ತಿಗೆ ಕಾನೂನು ತಿಳಿವಳಿಕೆ ಅವಶ್ಯ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಆರ್.ವೈ. ಶಶಿಧರ ಹೇಳಿದರು.
ನಗರದ ಸ್ಥಳೀಯ ನ್ಯಾಯಾಲಯದ ವಕೀಲರ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು- ನೆರವು ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನಿನ ಪರಿಣಾಮ ಸಾರ್ವಜನಿಕರಿಗೆ ಅರ್ಥವಾಗಬೇಕಾದರೆ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕಾಗುತ್ತದೆ ಎಂದರು.
ಸಿವಿಲ್ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಪಿ.ಜೆ. ಸೋಮಶೇಖರ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಎಚ್ಚರ ಇದ್ದವರಿಗೆ ಮಾತ್ರ ಲಾಭ ತಟ್ಟುತ್ತದೆ. ಮಲಗಿದವರಿಗೆ ಕಾನೂನಿನ ಉಪಯೋಗ ಬಾರದು. ಕಾರಣ ಮಹಿಳೆಯರು ಜಾಗೃತರಾಗುವಂತೆ ಸಲಹೆ ನೀಡಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ಭೀಮನಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾದ ಸರ್ಕಾರಿ ಸಹಾಯಕ ಅಭಿಯೋಜಕಿ ಲಕ್ಷ್ಮೀದೇವಿ ಪಾಟೀಲ್, ವಕೀಲರ ಸಂಘದ ಕಾರ್ಯದರ್ಶಿ ಖಾಜಿಮಲಿಕ್ ಉಪಸ್ಥಿತರಿದ್ದರು. ನಿರುಪಾದೆಪ್ಪ ಗುಡಿಹಾಳ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

